ಮಹಾರಾಷ್ಟ್ರ: ಶಿವಸೇನೆಯ ನಾಯಕರನ್ನು ಕರೆತರಲು ಹೊರಟಿದ್ದ ಹೆಲಿಕಾಪ್ಟರ್ ಪತನಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ಇಂದು ಶುಕ್ರವಾರ ನಡೆದಿದೆ.
ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ವಾಲಿದ ಪರಿಣಾಮ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದಾರೆ. ಘಟನೆ ಸಂಭವಿಸಿದಾಗ ಚಾಪರ್ ಶಿವಸೇನೆಯ ಶಿಂಧೆ ಬಣದ ನಾಯಕಿ ಸುಷ್ಮಾ ಅಂಧಾರೆಯನ್ನು ಚುನಾವಣಾ ಪ್ರಚಾರಕ್ಕೆ ಕರೆದೊಯ್ಯಲು ಹೋಗುತ್ತಿತ್ತು. ಇಂದು ಬೆಳಗ್ಗೆ ೯.೩೦ರ ಸುಮಾರಿಗೆ ಹೆಲಿಕಾಪ್ಟರ್ ನ ಪೈಲಟ್‌ಗಳು ಅದನ್ನು ಮಹುಹಾದ್ ನಲ್ಲಿರುವ ತಾತ್ಕಾಲಿಕ ಹೆಲಿಪ್ಯಾಡ್ ನಲ್ಲಿ ಇಳಿಸಲು ಪ್ರಯತ್ನಿಸಿದಾಗ ಈ ದುರ್ಘಟನೆ ಸಂಭವಿಸಿದೆ.