Monday, April 21, 2025
Google search engine

Homeರಾಜಕೀಯಶಾಸಕರು, ಸಚಿವರ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಶಾಸಕರು, ಸಚಿವರ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ೩೦ ತಿಂಗಳ ನಂತರ ಶಾಸಕರು, ಸಚಿವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಬೇಕೆಂದಿರುವ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವಿಚಾರವಾಗಿ ಎಲ್ಲಾ ಶಾಸಕರು ಹೇಳಿದ್ದಾರೆಯೇ ? ಎಂದು ಪ್ರಶ್ನಿಸಿದರು. ಹಾಗೇನಾದರೂ ಹೇಳಿದ್ದರೆ ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.

ಇಂದು ನಗರದಲ್ಲಿ ಈ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಅವಧಿಯಲ್ಲಿ ನಡೆದ ಜಾತಿ ಸಮೀಕ್ಷೆ ಸಂದರ್ಭದಲ್ಲಿ ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದರು. ಅವರು ವರದಿ ಸಲ್ಲಿಸಿದಾಗ ಅಂದಿನ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ನಂತರ ಬಂದ ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿ ಅವರಾಗಲಿ ವರದಿ ಪಡೆಯಲಿಲ್ಲ. ಈಗ ಅವರು ವರದಿ ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅವರು ಕೊಟ್ಟಾಗ ಸ್ವೀಕರಿಸಲಾಗುವುದು ಎಂದರು. ತೆಗೆದುಕೊಂಡಾಗ ಅಲ್ವಾ ಬಿಡುಗಡೆ ಮಾಡೋದು. ವರದಿ ಮೊದಲು ಕ್ಯಾಬಿನೆಟ್‌ಗೆ ಹೋಗಬೇಕು. ಅಲ್ಲಿ ಚರ್ಚೆ ಆದ ಬಳಿಕ ಬಿಡುಗಡೆ ಆಗಲಿದೆ. ನಂತರ ಟಿಕೆಟ್ ನೀಡಲಾಗುತ್ತೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular