Friday, April 18, 2025
Google search engine

Homeಅಪರಾಧಕಾನೂನುಸಿ.ಪಿ.ಯೋಗೇಶ್ವರ್ ವಿರುದ್ಧ ಹೇಳಿಕೆ ನೀಡದಂತೆ ನಿಶಾಗೆ ಹೈಕೋರ್ಟ್ ನಿರ್ಬಂಧ

ಸಿ.ಪಿ.ಯೋಗೇಶ್ವರ್ ವಿರುದ್ಧ ಹೇಳಿಕೆ ನೀಡದಂತೆ ನಿಶಾಗೆ ಹೈಕೋರ್ಟ್ ನಿರ್ಬಂಧ

ಬೆಂಗಳೂರು: ಮಾಜಿ ಸಚಿವ ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ವಿರುದ್ಧ ಅವರ ಮೊದಲ ಪತ್ನಿಯ ಪುತ್ರಿ ನಿಶಾ ಯೋಗೇಶ್ವರ್ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಮಾನಹಾನಿಕರ ಅಥವಾ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ನಿರ್ಬಂಧಿಸಿ ಆದೇಶಿದೆ.

ನಿಶಾ ಹೇಳಿಕೆಗೆ ನಿರ್ಬಂಧ ಕೋರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪತ್ನಿ ಪಿ.ವಿ.ಶೀಲಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದೆ. ವಿಚಾರಣೆ ವೇಳೆ ನನ್ನ ಪತಿ ಸಿ.ಪಿ.ಯೋಗೇಶ್ವರ್ ಚುನಾವಣೆಗೆ ಸ್ಪರ್ಧಿಸಿರುವ ಬೆನ್ನಲ್ಲೇ ನಮ್ಮ ಮಲಮಗಳಾದ ನಿಶಾ ಯೋಗೇಶ್ವರ್ ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಕುಟುಂಬದ ವಿರುದ್ಧ ಅವಹೇಳನಕಾರಿ, ಮಾನಹಾನಿಕಾರಕ, ಆಧಾರರಹಿತ ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಸಂಬಂಧ ಬೆಂಗಳೂರಿನ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕೋರ್ಟ್ ಗಮನಕ್ಕೆ ತಂದರು.

ಅರ್ಜಿಯ ಮಧ್ಯಂತರ ಮನವಿಯನ್ನು ಪರಿಗಣಿಸಿರುವ ಹೈಕೋರ್ಟ್, ಪ್ರತಿವಾದಿಗಳಾದ ಇನ್‌ಸ್ಟಾಗ್ರಾಂ, ಎಕ್ಸ್ ಕಾರ್ಪ್ (ಟ್ವಿಟರ್), ಗೂಗಲ್ ಮತ್ತು ಯೂಟ್ಯೂಬ್ ಜಾಲತಾಣಗಳಲ್ಲಿ ನಿಶಾ ಯೋಗೇಶ್ವರ್ ಅವರ ನಿಂದನಾತ್ಮಕ ಹೇಳಿಕೆಗಳನ್ನು ಅಪ್‌ಲೋಡ್ ಮಾಡಬಾರದು ಮತ್ತು ಈಗಾಗಲೇ ಪ್ರಸಾರ ಮಾಡಲಾಗಿರುವ ತುಣಕುಗಳನ್ನು ತಡೆಹಿಡಿಯಬೇಕು ಎಂದು ಮಧ್ಯಂತರ ಆದೇಶ ನೀಡಿ ವಿಚಾರಣೆ ಮುಂದೂಡಿದೆ.

RELATED ARTICLES
- Advertisment -
Google search engine

Most Popular