Monday, April 7, 2025
Google search engine

HomeUncategorizedರಾಷ್ಟ್ರೀಯಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ, ಐವರು ಸಾವು, 100ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ, ಐವರು ಸಾವು, 100ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

ವಯನಾಡು: ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಇಂದು (ಮಂಗಳವಾರ) ಮುಂಜಾನೆ ಭಾರೀ ಭೂಕುಸಿತ ಸಂಭವಿಸಿರುವುದಾಗಿ ವರದಿಯಾಗಿದೆ.

ಮಾಹಿತಿ ಪ್ರಕಾರ ನೂರಾರು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳು ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ, ಇದೇ ವೇಳೆ ಭೂಕುಸಿತದಲ್ಲಿ ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿದ್ದಾರೆ ಇದನ್ನು ಜಿಲ್ಲಾಡಳಿತ ಕೂಡ ದೃಢಪಡಿಸಿದೆ.

ಈಗಾಗಲೇ ಕಣ್ಣೂರಿನ ಎರಡು ರಕ್ಷಣಾ ತಂಡಗಳು ಕಾರ್ಯಗಳಲ್ಲಿ ಸಹಾಯ ಮಾಡಲು ವಯನಾಡ್‌ಗೆ ತೆರಳುತ್ತಿರುವುದಾಗಿ ವರದಿಯಾಗಿದೆ. ಭೂ ಕುಸಿತದಿಂದ ಮಣ್ಣಿನಡಿ ನೂರಾರು ಮಂದಿ ಸಿಲುಕಿರುವ ಶಂಕೆ ಇದೆ ಎಂದು ಅಲ್ಲಿನ ಸ್ಥಳೀಯರು ಮಾಹಿತಿ ನೀಡಿದ್ದಾರೆ, ಭಾರೀ ಮಳೆಯಿಂದಾಗಿ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗುತ್ತಿದೆ.

RELATED ARTICLES
- Advertisment -
Google search engine

Most Popular