ಕುಸಿತದ ರಭಸಕ್ಕೆ ಕಂಟೇನರ್ ಪಲ್ಟಿ, ರಸ್ತೆಯಲ್ಲಿ ಸಿಲುಕಿದ ವಾಹನಗಳು
ಹಾಸನ: ಜಿಲ್ಲೆಯಲ್ಲಿ ಭಾರೀ ಮಳೆಗೆ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದ ಪರಿಣಾಮ ಶಿರಾಡಿ ಘಾಟ್ ಮತ್ತೆ ಬಂದ್ ಆಗಿದೆ.
ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ಶಿರಾಡಿಘಾಟ್ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ.
ಗುಡ್ಡ ಕುಸಿತದ ರಭಸಕ್ಕೆ ಬೃಹತ್ ಗಾತ್ರದ ಕಂಟೇನರ್ ಒಂದು ಪಲ್ಟಿಯಾಗಿದೆ. ಇದರೊಂದಿಗೆ ಇತರೆ ವಾಹನಗಳು ಕೂಡ ಸಿಲುಕಿಕೊಂಡಿವೆ. ಪಲ್ಟಿಯಾದ ಕಂಟೇನರ್ ಜೊತೆಗೆ ಚಾಲಕ ಕೂಡ ಮಣ್ಣಿನಡಿ ಸಿಲುಕಿಕೊಂಡಿದ್ದಾರೆ.
ಇಂದು ಬೆಳಗ್ಗೆ ಇದೇ ಸ್ಥಳಕ್ಕೆ ಕಂದಾಯ ಸಚಿವ ಕೃಷ್ಣಬೈರೇಗೌಡ ಭೇಟಿ ನೀಡಿದ್ದರು. ಸಂಜೆ ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿದೆ. ಇದರಿಂದಾಗಿ ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಸಂಚಾರ ಬಂದ್ ಆಗಿದೆ.