ಮಂಗಳೂರು(ದಕ್ಷಿಣ ಕನ್ನಡ): ಕರ್ನಾಟಕ ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಶಿಮ್ಲಾದಲ್ಲಿ ಗುರುವಾರ ಹಿಮಾಚಲ ಪ್ರದೇಶದ ವಿಧಾನ ಸಭಾಧ್ಯಕ್ಷ ಕುಲದೀಪ್ ಸಿಂಗ್ ಪತಾನಿಯಾ ಅವರನ್ನು ಭೇಟಿಯಾದರು.
ಈ ಸಂದರ್ಭದಲ್ಲಿ ಅವರು ಅಗತ್ಯ ಮಾಹಿತಿಯನ್ನು ಪಡೆದರು. ವಿಧಾನ ಸಭೆಯ ಇತರೆ ಕಾರ್ಯ ಚಟುವಟಿಕೆಗಳ ಬಗ್ಗೆ ಸಹ ಚರ್ಚಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ, ವಿಧಾನ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮೀ ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳವಾರ ಉತ್ತರ ಪ್ರದೇಶ ವಿಧಾನ ಸಭಾಧ್ಯಕ್ಷರಾದ ಸತೀಶ್ ಮಹಾನ ಅವರನ್ನು ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಅವರು ಚರ್ಚಿಸಿ ಅಗತ್ಯ ಮಾಹಿತಿಯನ್ನು ಪಡೆದರು. ಉತ್ತರ ಪ್ರದೇಶ ವಿಧಾನ ಸಭೆಯ ಇತರೆ ಕಾರ್ಯ ಚಟುವಟಿಕೆಗಳ ಬಗ್ಗೆ ಸಹ ಚರ್ಚಿಸಿದರು.
ಇ-ಲೆಜಿಸ್ಲೇಚರ್ (ಇ-ವಿಧಾನ ಯೋಜನೆ)ಅನ್ನು ಅಧ್ಯಯನ ಮಾಡಿ ಕರ್ನಾಟಕ ವಿಧಾನ ಮಂಡಲದಲ್ಲಿ ಜಾರಿಗೊಳಿಸುವ ಬಗ್ಗೆ ಸ್ಪೀಕರ್ ಯು.ಟಿ.ಖಾದರ್ ರವರು ನವದೆಹಲಿಯ ಸಂಸತ್ತಿನಲ್ಲಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿಯಾದರು ಹಾಗೂ ಲೋಕಸಭೆಯ ಸೆಕ್ರೆಟರಿ ಜನರಲ್ ಶ್ರೀ ಉತ್ಪಲ್ ಕುಮಾರ್ ಸಿಂಗ್, ರಾಜ್ಯಸಭೆಯ ಸೆಕ್ರೆಟರಿ ಜನರಲ್ ಪ್ರಮೋದ್ ಚಂದ್ರ ಮೋದಿ ಹಾಗೂ ಗೌರವಾನ್ವಿತ ಸಭಾಧ್ಯಕ್ಷ ರಾಮ್ ನಿವಾಸ್ ಗೋಯಲ್ ಅವರನ್ನು ದೆಹಲಿ ವಿಧಾನಸಭೆಯಲ್ಲಿ ಭೇಟಿ ಮಾಡಿದ್ದರು.