ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಗಳನ್ನು ಮೀರಿ ಬಿಜೆಪಿ ಯಶಸ್ವಿಯಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ಹೊಂದಿದ್ದಾರೆ.
ಇಂದು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದು ಖಚಿತ. ಬಿಜೆಪಿ ಯಾವತ್ತಿಗೂ ಇದನ್ನೇ ಹೇಳುತ್ತಲೇ ಬಂದಿದೆ. ಆದರೆ, ಕೆಲವು ಸಂಶಯ ವ್ಯಕ್ತಪಡಿಸಿದ್ದಾರೆ.
ಈಗ ಚುನಾವಣಾ ಸಮೀಕ್ಷೆಗಳೇ ಎನ್‌ಡಿಎ ಐತಿಹಾಸಿಕ ಗೆಲುವನ್ನು ಖಚಿತಪಡಿಸಿವೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಎನ್‌ಡಿಎ ಪ್ರಚಂಡ ಬಹುಮತದಿಂದ ಗೆಲ್ಲಲಿದ್ದಾರೆ. ಕರ್ನಾಟಕದಲ್ಲಿ ೨೫ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದ ಅವರು, ಜನರ ದಿಕ್ಕು ತಪ್ಪಿಸುವಲ್ಲಿ, ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು. ವಾಸ್ತವವನ್ನೇ ಮರೆ ಮಾಚುತ್ತಾರೆ ಎಂದು ಆರೋಪಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಚಿವ ನಾಗೇಂದ್ರ ಬಂಧನವಾದರೆ ಎಲ್ಲವೂ ಬಯಲಾಗಲಿದೆ. ಸಚಿವರನ್ನ ಬಂಧಿಸಿದ ಈ ಭ್ರಷ್ಟಾಚಾರ ಹಗರಣದಲ್ಲಿ ಸಿಎಂ ಮತ್ಯಾರು, ಬಹಿರಂಗವಾಗಿ ಅವರ ಪಾತ್ರ ಏನಿದೆ ಎಂದು ಗೊತ್ತಾಗಲಿದೆ. ಯಾವುದೇ ರಾಜ್ಯ ಸರ್ಕಾರ ಮೊದಲು ಸಚಿವ ನಾಗೇಂದ್ರರನ್ನ ಬಂಧಿಸಲಿ ಎಂದು ಒತ್ತಾಯಿಸಿದರು.