Thursday, April 3, 2025
Google search engine

Homeಆರೋಗ್ಯರಾಜ್ಯದಲ್ಲಿ ಹೆಚ್‌ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ: ಆರೋಗ್ಯ ಇಲಾಖೆ ಸೂಚನೆ

ರಾಜ್ಯದಲ್ಲಿ ಹೆಚ್‌ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ: ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಹೆಚ್‌ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ ಎಂದು ಆರೋಗ್ಯ ಇಲಾಖೆ ಆಸ್ಪತ್ರೆಗೆ ತೆರಳುವವರಿಗೆ ಸೂಚನೆ ನೀಡಿದೆ.

ಖಾಸಗಿ ಲ್ಯಾಬ್ ಹಾಗೂ ಖಾಸಗಿ ಆಸ್ಪತ್ರೆಗಳ ಮೇಲೆ ಇಲಾಖೆ ನಿಗಾ ಇಡಲಾಗುವುದು. ಹೆಚ್‌ಎಂಪಿವಿ ವೈರಸ್ ಟೆಸ್ಟ್ ಮಾಡಿಸಿಕೊಳ್ಳಿ ಎನ್ನುವವರ ಮೇಲೆ ಹದ್ದಿನ ಕಣ್ಣು ಇಡುವುದಾಗಿ ತಿಳಿಸಿದ್ದು, ಜ್ವರ, ಕೆಮ್ಮು ಎಂದು ಆಸ್ಪತ್ರೆಗೆ ಹೋಗುವವರು ಹೆಚ್‌ಎಂಪಿವಿ ವೈರಸ್ ಟೆಸ್ಟ್ ಮಾಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಇಲಾಖೆ ತಿಳಿಸಿದೆ.

ಈ ವಿಚಾರವಾಗಿ ಇಂದು ಸಂಜೆಯೊಳಗೆ ಆರೋಗ್ಯ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಲಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್‌ಎಂಪಿವಿ ವೈರಸ್ ಟೆಸ್ಟ್​ಗೆ 10 ಸಾವಿರ ರೂ.ನಿಂದ 12 ಸಾವಿರ ರೂ. ದರ ಇದೆ. ಹೀಗಾಗಿ ಟೆಸ್ಟಿಂಗ್ ಅಗತ್ಯವಿಲ್ಲವೆಂದು ಇಲಾಖೆ ಪ್ರಕಟಣೆ ಹೊರಡಿಸಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸಾಮಾನ್ಯವಾಗಿ ಚಳಿಗಾಲದಲ್ಲಿ ವೈರಸ್ ಕಾಣಿಸಿಕೊಳ್ಳುವುದು ಸಹಜವಾಗಿದೆ. ಅದಕ್ಕಾಗಿ ಸರ್ಕಾರಿ ಆಸ್ಪತ್ರೆಗಳಲ್ಲೂ ಹೆಚ್‌ಎಂಪಿವಿ ಟೆಸ್ಟಿಂಗ್ ಮಾಡುವುದಿಲ್ಲ. ಈ ವೈರಸ್ ಅಪಾಯಕಾರಿ ಅಲ್ಲ ಎಂದು ಇಲಾಖೆ ಹೇಳಿದೆ.

RELATED ARTICLES
- Advertisment -
Google search engine

Most Popular