ಮಡಿಕೇರಿ :ಕಾವೇರಿಯ ಉಗಮ ಸ್ಥಾನ ತಲಕಾವೇರಿ ಶ್ರೀ ಭಗಂಡೇಶ್ವರ ತಲಕಾವೇರಿ ದೇವಾಲಯದಲ್ಲಿ ನಾಳೆ (ಅಕ್ಟೋಬರ್ 17) ರಂದು ಬೆಳಿಗ್ಗೆ 7.40ಕ್ಕೆ ತುಲಾಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದೆ .
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಎನ್ಎಸ್ ಬೋಸರಾಜು, ರಾಮಲಿಂಗ ರೆಡ್ಡಿ, ಸಂಸದ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್, ಶಾಸಕರಾದ ಎ ಎಸ್ ಪೊನ್ನಣ್ಣ, ಡಾ. ಮಂತರ್ ಗೌಡ ಪಾಲ್ಗೊಳ್ಳಲಿದ್ದಾರೆ.
ಪವಿತ್ರ ತೀರ್ಥೋದ್ಭವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಭಕ್ತರಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಮಡಿಕೇರಿ- ಭಾಗಮಂಡಲ- ತಲಕಾವೇರಿಗೆ ಹೋಗುವ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ .