Monday, February 16, 2026
Google search engine

Homeಅಪರಾಧಶಿವರಾತ್ರಿ ಜಾಗರಣೆಗೆ ತೆರಳಿದ್ದವರ ಮನೆ ಕಳ್ಳತನ

ಶಿವರಾತ್ರಿ ಜಾಗರಣೆಗೆ ತೆರಳಿದ್ದವರ ಮನೆ ಕಳ್ಳತನ

ವಿಜಯಪುರ: ಮಹಾಶಿವರಾತ್ರಿ ಜಾಗರಣೆಯನ್ನೇ ಬಂಡವಾಳ ಮಾಡಿಕೊಂಡ ಖದೀಮರು ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆ ಕಳ್ಳತನ ಮಾಡಿರುವ ಘಟನೆ ವಿಜಯಪುರ ನಗರದ ಶಾರದಾ ನಗರದಲ್ಲಿ ನಡೆದಿದೆ.

ಸೋಮಶೇಖರ ಗಣಿ ಎಂಬವರ ಮನೆ ಕಳ್ಳತನ ಮಾಡಲಾಗಿದೆ. ಮನೆಯಲ್ಲಿದ್ದ 40 ಸಾವಿರ ನಗದು, 154 ಗ್ರಾಂ ಚಿನ್ನಾಭರಣ, 270 ಗ್ರಾಂ ಬೆಳ್ಳಿ ಆಭರಣ ಕದ್ದು ಖದೀಮರು ಪರಾರಿಯಾಗಿದ್ದಾರೆ. ಮನೆಗೆ ಬೀಗ ಹಾಕಿ ಶಿವಗಿರಿಗೆ ಕುಟುಂಬಸ್ಥರು ತೆರಳಿದ್ದರು. ಇಂಡಿಯಾ – ಪಾಕ್ ಟಿ20 ಕ್ರಿಕೆಟ್ ಮ್ಯಾಚ್ ಇದ್ದ ಕಾರಣ ಬೀದಿಯಲ್ಲೂ ಜನರಿರಲಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡು ಕಳ್ಳರು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.

ಸದ್ಯ ಸ್ಥಳಕ್ಕೆ ಗೋಲಗುಂಬಜ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು, ಶ್ವಾನದಳ ತಂಡಗಳಿಂದಲೂ ಪರೀಕ್ಷೆ ನಡೆದಿದೆ. ಗೋಲಗುಂಬಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES
- Advertisment -
Google search engine

Most Popular