Thursday, April 3, 2025
Google search engine

Homeರಾಜಕೀಯಹನಿಟ್ರ್ಯಾಪ್ ಪ್ರಕರಣ: ಸಿಬಿಐ ಅಥವಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ: ಆರ್.ಅಶೋಕ್

ಹನಿಟ್ರ್ಯಾಪ್ ಪ್ರಕರಣ: ಸಿಬಿಐ ಅಥವಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ: ಆರ್.ಅಶೋಕ್

ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಥವಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿದ ಆರ್.ಅಶೋಕ್, 48 ಜನರ ಮೇಲೆ ಹನಿಟ್ರ್ಯಾಪ್‌ ಆಗಿದೆ ಎಂದು ಸಹಕಾರ ಸಚಿವ ರಾಜಣ್ಣ ಅವರೇ ಸದನದಲ್ಲಿ ಹೇಳಿದ್ದಾರೆ. ಈ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸರಿಯಾದ ಉತ್ತರ ಕೊಟ್ಟಿಲ್ಲ. ಇದು ಚಿಕ್ಕ ವಿಚಾರ ಅಲ್ಲ, ಗಂಭೀರ ಪ್ರಕರಣ. ಹೀಗಾಗಿ ಈ ಬಗ್ಗೆ ಸಿಬಿಐ ಅಥವಾ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಬೇಕು ಎಂದರು.

ಕೆ.ಎನ್.ರಾಜಣ್ಣ ಅವರು ಸಾಮಾನ್ಯ ವ್ಯಕ್ತಿಯೇನಲ್ಲ. ಅವರು ಇದೇ ಕಾಂಗ್ರೆಸ್‌ ಸರ್ಕಾರದ ಸಚಿವರು. ಹೀಗಿರುವಾಗ ಅವರೇ ಸದನದಲ್ಲಿ ಆರೋಪ ಮಾಡಿದ್ದು, ಈ ಸರ್ಕಾರದಲ್ಲಿ ದಲಿತ ಸಚಿವರಿಗೆ ಸೂಕ್ತ ರಕ್ಷಣೆಯೇ ಇಲ್ಲ. ಇದನ್ನೆಲ್ಲ ಗಮನಿಸಿದರೆ ಸಿಎಂ ಕುರ್ಚಿಗಾಗಿಯೇ ಹನಿಟ್ರ್ಯಾಪ್‌ ಯತ್ನ ನಡೆದಿದೆ ಎಂದು ಆರ್. ಅಶೋಕ್‌ ಆರೋಪಿಸಿದರು.

RELATED ARTICLES
- Advertisment -
Google search engine

Most Popular