Friday, April 11, 2025
Google search engine

Homeಅಪರಾಧಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ: ಕಾರು-KSRTC ಬಸ್ ಡಿಕ್ಕಿ, ಐವರಿಗೆ ಗಾಯ

ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ: ಕಾರು-KSRTC ಬಸ್ ಡಿಕ್ಕಿ, ಐವರಿಗೆ ಗಾಯ

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಐವರಿಗೆ ಗಾಯವಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಭಾನುವಾರ ನಡೆದಿದೆ.

ಕೆ.ಎಂ.ದೊಡ್ಡಿಯ ಮದ್ದೂರು-ಮಳವಳ್ಳಿ ರಸ್ತೆಯಲ್ಲಿ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರಿಗೆ ಕೆಎಸ್‌ಆರ್‌ಟಿಸಿ ಬಸ್ ಓವರ್ ಟೇಕ್ ಮಾಡಲು ಹೋಗಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಪರಿಣಾಮ ಕಾರಿನಲ್ಲಿದ್ದ ಐವರ ಪೈಕಿ ಓರ್ವನಿಗೆ ಗಂಭೀರ ಗಾಯವಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ . ಕಾರಿನಲ್ಲಿದ್ದವರು ಮಳವಳ್ಳಿ ತಾಲೂಕಿನ ಬೆಳಕವಾಡಿ ಗ್ರಾಮದವರು ಎಂದು ಹೇಳಲಾಗುತ್ತಿದೆ.

ಗಾಯಾಳುಗಳಿಗೆ ಕೆ.ಎಂ.ದೊಡ್ಡಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಮಿಮ್ಸ್‌ಗೆ ರವಾನೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. ಘಟನೆ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular