Wednesday, April 16, 2025
Google search engine

Homeಅಪರಾಧಹೊಸಕೋಟೆ: ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನ ಕೊಲೆ

ಹೊಸಕೋಟೆ: ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನ ಕೊಲೆ

ಹೊಸಕೋಟೆ: ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಡಾಬಾ ಬಳಿ ನಡೆದಿದೆ. ಹೊಸಕೋಟೆ ತಾಲೂಕಿನ ಗಂಗಾಪುರ ನಿವಾಸಿ ನವೀನ್ ನಾಯಕ್ (27) ಕೊಲೆಯಾದ ಯುವಕ. ನವೀನ್​ ತರಕಾರಿ ವ್ಯಾಪಾರಕ್ಕೆಂದು ಹೊಸಕೋಟೆ ಕಡೆ ಬರುತ್ತಿದ್ದರು.

ಇದೇ ವೇಳೆ ಗುಂಪೊಂದು ಹೆದ್ದಾರಿಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿಕೊಂಡು ಹೋಗುತ್ತಿತ್ತು. ಇದನ್ನು ಕಂಡು ನವೀನ್​​ ಗುಂಪನ್ನು ಪ್ರಶ್ನಿಸಿದ್ದಾರೆ. ಇಷ್ಟಕ್ಕೆ ಗುಂಪು ನವೀನ್​ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಮಾಡಿ ಕೊಲೆ ಮಾಡಿದೆ. ಕೊಲೆ ಮಾಡಿದ ಬಳಿಕ ದುಷ್ಕರ್ಮಿಗಳು ವಾಹನ ಸಮೇತ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹೊಸಕೋಟೆ ಠಾಣೆ ಪೊಲೀಸರು, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಾರು ಅಥವಾ ವೈಯಕ್ತಿಕ ವಿಚಾರಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ.

ಪ್ರಕರಣ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಹೊಸಕೋಟೆ ಕಡೆಯಿಂದ ಹೆದ್ದಾರಿಯಲ್ಲಿ ಎರಡು ಕಾರುಗಳು ಬಂದಿವೆ. 10 ಕಿ.ಮೀ.ವರೆಗೂ ಎರಡೂ ಕಾರಿನವರು ಓವರ್​ಟೇಕ್ ಮಾಡಿಕೊಂಡು ಬಂದಿದ್ದಾರೆ. ಬಳಿಕ ಎರಡೂ ಕಾರಿನಲ್ಲಿದ್ದವರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಆಲ್ಟೋಕಾರಲ್ಲಿದ್ದ ನಾಲ್ವರು ಓಮ್ನಿಕಾರಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ವೇಳೆ ಓಮ್ನಿ ಕಾರಲ್ಲಿದ್ದ ಓರ್ವ ಮೃತಪಟ್ಟಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ ಎಂದು ಹೇಳಿದರು.

ಪ್ರಕರಣದ ಬಗ್ಗೆ ಹೊಸಕೋಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದಷ್ಟು ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸುತ್ತೇವೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular