Friday, April 11, 2025
Google search engine

Homeರಾಜ್ಯಹೋಟೆಲ್, ರೆಸಾರ್ಟ್‌ನವರು ನಿಯಮಗಳಿಗೆ ಅನುಸಾರ ಹೊಸ ವರ್ಷಾಚರಣೆ ಮಾಡಿ: ಡಿಕೆಶಿ‌ ಮನವಿ

ಹೋಟೆಲ್, ರೆಸಾರ್ಟ್‌ನವರು ನಿಯಮಗಳಿಗೆ ಅನುಸಾರ ಹೊಸ ವರ್ಷಾಚರಣೆ ಮಾಡಿ: ಡಿಕೆಶಿ‌ ಮನವಿ

ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆ ಈಗಾಗಲೇ ಎಲ್ಲ ಅಗತ್ಯ ಬಂದೋಬಸ್ತ್ ಮಾಡಿಕೊಂಡಿದೆ. ಈ ಬೆನ್ನಲ್ಲೇ ಬೆಂಗಳೂರಿನಲ್ಲಿ ಮಾತಾಡಿದ ಡಿಸಿಎಂ ಡಿಕೆ ಶಿವಕುಮಾರ್ ಸಹ ನಿಯಮಗಳಿಗೆ ಒಳಪಟ್ಟು ಹೊಸ ವರ್ಷಾಚರಣೆ ಮಾಡುವಂತೆ ಆಯೋಜಕರಿಗೆ ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆ ರೂಪದ ಮನವಿ ಮಾಡಿಕೊಂಡಿದ್ದಾರೆ.

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆ ಏಳು ದಿನಗಳ ಶೋಕಾಚರಣೆ ಘೋಷಣೆ ಮಾಡಿದ್ದೇವೆ. ಇದು ಕೇವಲ ಸರ್ಕಾರದ ಕಾರ್ಯಕ್ರಮಗಳಿಗೆ ಮಾತ್ರ ಅನ್ವಯ ಆಗುತ್ತದೆ. ಖಾಸಗಿ ಕಾರ್ಯಕ್ರಮಗಳನ್ನು ನಿಯಮಗಳಿಗೆ ಅನುಸಾರ ಮಾಡಿಕೊಳ್ಳಿ ಎಂದು ಹೇಳಿದ್ದಾರೆ.

ಅಲ್ಲದೇ ಹೋಟೆಲ್, ರೆಸಾರ್ಟ್‌ನವರು ಸರ್ಕಾರದ ನಿಯಮಗಳಿಗೆ ಅನುಸಾರ ಹೊಸ ವರ್ಷದ ಆಚರಣೆ ಮಾಡಿ. ನಾವು ಬ್ಯುಸಿನೆಸ್ ಮಾಡುವವರಿಗೂ ಅಡ್ಡಿ ಪಡಿಸಲು ಆಗಲ್ಲ. ಬೆಂಗಳೂರಿನಾದ್ಯಂತ 10,000 ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಇದನ್ನು ಎಚ್ಚರಿಕೆ ಅಂತನಾದ್ರೂ ತಿಳಿದುಕೊಳ್ಳಿ, ಮನವಿ ಅಂತನಾದ್ರೂ ತಿಳಿದುಕೊಳ್ಳಿ ಆದ್ರೆ ನಿಯಮಗಳಿಗೆ ಅನುಸಾರ, ಎಚ್ಚರಿಕೆಯಿಂದ ಹೊಸವರ್ಷದ ಆಚರಣೆ ಮಾಡಿ ಅಂತ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular