ಮೈಸೂರು,ಆ.06: ಮೈಸೂರು ನಗರದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಭೇಟಿ ನೀಡಿ ಮಾಹಿತಿ ಪಡೆದರು.
ಮೈಸೂರು ನಗರದ ಕ್ರಾಫರ್ಡ್ ಹಾಲ್ ಮುಂಭಾಗ ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಹಮ್ಮಿಕೊಂಡಿರುವ ಅಹೋ ರಾತ್ರಿ ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದಾರಾಮಯ್ಯನವರಲ್ಲಿ ಮೈಸೂರು ವಿಶ್ವವಿದ್ಯಾನಿಲಯವು 2024-25 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಾತಿ ನೇರ ಸಂದರ್ಶನ ಆಹ್ವಾನಿಸಿರುವುದನ್ನು ಖಂಡಿಸಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅತಿಥಿ ಉಪನ್ಯಾಸಕರನ್ನು ಮುಂದುವರೆಸುವಂತೆ ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೂರವಾಣಿ ಮೂಲಕ ಕುಲಪತಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಕೂಡಲೇ ಇದೇ ಉಪನ್ಯಾಸಕರನ್ನು ಮುಂದುವರಿಸುವಂತೆ ಸೂಚಿಸಿ, ಉಸ್ತುವಾರಿ ಸಚಿವರಾದ ಎಚ್ ಸಿ ಮಹದೇವಪ್ಪ, ವಿಧಾನ ಪರಿಷತ್ ಸದಸ್ಯ ಡಾ ಯತೀಂದ್ರ ಸಿದ್ದರಾಮಯ್ಯನವರಿಗೆ ಈ ಬಗ್ಗೆ ಗಮನ ಹರಿಸುವಂತೆ ಸೂಚನೆ ನೀಡಿದರು. ಈ ವೇಳೆ ಹುಣಸೂರು ಮಾಜಿ ಶಾಸಕ ಎಚ್ ಪಿ ಮಂಜುನಾಥ್ ಇದ್ದರು.