Sunday, April 20, 2025
Google search engine

Homeರಾಜ್ಯಅನಾರೋಗ್ಯದ ನೆಪವೊಡ್ಡಿ ವಿವಾಹಿತ ಮಹಿಳೆಗೆ ಗೃಹ ಬಂಧನ: ಮಹಿಳೆಯ ರಕ್ಷಣೆ, ಆಸ್ಪತ್ರೆಗೆ ದಾಖಲು

ಅನಾರೋಗ್ಯದ ನೆಪವೊಡ್ಡಿ ವಿವಾಹಿತ ಮಹಿಳೆಗೆ ಗೃಹ ಬಂಧನ: ಮಹಿಳೆಯ ರಕ್ಷಣೆ, ಆಸ್ಪತ್ರೆಗೆ ದಾಖಲು


ಮಂಗಳೂರು(ದಕ್ಷಿಣ ಕನ್ನಡ): ಅನಾರೋಗ್ಯದ ನೆಪವೊಡ್ಡಿ ಮೂರು ತಿಂಗಳಿನಿಂದ ವಿವಾಹಿತ ಮಹಿಳೆಯನ್ನು ಕನಿಷ್ಠ ಸೌಲಭ್ಯವೂ ಇಲ್ಲದ ಕೊಠಡಿಯಲ್ಲಿ ಕೂಡಿ ಹಾಕಿದ ಅಮಾನವೀಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕೆಮ್ಮಿಂಜೆ ಗ್ರಾಮದ ಇಡಬೆಟ್ಟು ಸಮೀಪದ ಕರೆಜ್ಜದಲ್ಲಿ ಬೆಳಕಿಗೆ ಬಂದಿದೆ.
ಈ ಕುರಿತು ಮಾಹಿತಿ ಪಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಇಲಾಖೆಯು ಪೊಲೀಸರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಮಹಿಳೆಯನ್ನು ರಕ್ಷಿಸಿ ಚಿಕಿತ್ಸೆಗಾಗಿ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಶ್ರೀಪತಿ ಹೆಬ್ಬಾರ್‌ ಎಂಬುವವರ ಪತ್ನಿ ಆಶಾಲತಾ ದಿಗ್ಬಂಧನಕ್ಕೆ ಒಳಗಾಗಿದ್ದ ಮಹಿಳೆ. ಮನೆ ಪಕ್ಕದ ಸಿಮೆಂಟ್‌ ಶೀಟ್‌ ಆಳವಡಿಸಿದ ಕಿಟಕಿ, ವಿದ್ಯುತ್‌ ಬೆಳಕು ಇಲ್ಲದ ಒಂದೇ ಬಾಗಿಲಿನ ಕೋಣೆಯಲ್ಲಿ ದಿಗ್ಬಂಧನದಲ್ಲಿರಿಸಲಾಗಿತ್ತು. ಈ ಕುರಿತು ಮಾಹಿತಿ ಪಡೆದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಆಶಾಲತಾ ಮೂಲತಃ ವಿಟ್ಲ ಸಮೀಪದವರು. ಕೆಲವು ವರ್ಷಗಳ ಹಿಂದೆ ಶ್ರೀಪತಿ ಆಕೆಯನ್ನು ಮದುವೆಯಾಗಿದ್ದರು. ಇವರು ಅಂತರ್ ಜಾತಿ ವಿವಾಹವಾಗಿದ್ದು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆರಂಭದಲ್ಲಿ ಅನ್ಯೋನ್ಯವಾಗಿದ್ದರು ಎನ್ನಲಾಗಿದೆ. ಬಳಿಕ ಆಶಾ ಅವರ ಆರೋಗ್ಯ ಸರಿ ಇಲ್ಲ ಎಂಬ ಕಾರಣಕ್ಕಾಗಿ ಮನೆ ಸಮೀಪದ ಕೊಠಡಿಯೊಳಗೆ ಕೂಡಿ ಹಾಕಲಾಗಿತ್ತು.

RELATED ARTICLES
- Advertisment -
Google search engine

Most Popular