ಚಿಕ್ಕಮಗಳೂರು: ಶೃಂಗೇರಿ ತಾಲೂಕು ನೆಮ್ಮಾರ್ ಶಂಕರಪ್ಪ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಕಳ್ಳರು ಚಿನ್ನ ಮತ್ತು ನಗದು ದೋಚಿ ಪರಾರಿಯಾಗಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಅಂದಾಜು 1.50ಲಕ್ಷ ರೂ. ನಗದು ಹಾಗೂ ಚಿನ್ನಾಭರಣವನ್ನು ಹೊತ್ತೊಯ್ದಿದ್ದಾರೆ.
ನೆಮ್ಮಾರು ಮುಖ್ಯ ರಸ್ತೆಯಲ್ಲಿರುವ ಶಂಕರಪ್ಪ ಅವರ ಮನೆಗೆ ಹಿಂಬಾಗಿನಿಂದ ನುಗ್ಗಿದ ಕಳ್ಳರು ಕಳ್ಳತನ ನಡೆಸಿದ್ದಾರೆ. ಶಂಕರಪ್ಪ ಅವರು ಶನಿವಾರ ಸಂಜೆ ಮನೆಗೆ ಹಿಂದುರಿಗಿದಾಗ ಮನೆಯಲ್ಲಿ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ.