ಹೊಸೂರು : ಸಾಲಿಗ್ರಾಮ ತಾಲೂಕಿನ ಹನಸೋಗೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ನೂತನ ಉಪಾಧ್ಯಕ್ಷರಾಗಿ ಎಚ್.ಪಿ.ಕರೀಗೌಡ ನೇಮಕ ಗೊಂಡಿದ್ದಾರೆ.
ಶಾಸಕ ಡಿ.ರವಿಶಂಕರ್ ಅವರ ಸೂಚನೆಯ ಮೇರೆಗೆ ಕರೀಗೌಡ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಶನಿವಾರ ಕಾಲೇಜಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಕರೀಗೌಡ ತಮ್ಮ ಅವಧಿಯಲ್ಲಿ ಶಾಸಕ ಡಿ.ರವಿಶಂಕರ್ ಅವರ ಸಹಕಾರದೊಂದಿಗೆ ಕಾಲೇಜಿನ ಶೈಕ್ಷಣಿಕ ಅಭಿವೃದ್ದಿಗೆ ಶ್ರಮಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ್,ಉಪನ್ಯಾಸಕರಾದ ಬಸಣ್ಣ, ಬೋರೇಗೌಡ, ಸುರೇಶ್, ಮಹದೇವ್,ಕರಬಸಪ್ಪಸಾರಥಿ, ಕಾಂಗ್ರೇಸ್ ಮುಖಂಡರಾದ ನವೀನ್ ಲಂಡನ್, ಎಚ್.ಜಿ. ಸಂದೀಪ್ ಸೇರಿದಂತೆ ಇನ್ನಿತರರು ಹಾಜರಿದ್ದರು.