Saturday, April 19, 2025
Google search engine

Homeರಾಜ್ಯಹೆಚ್‌ಎಸ್‌ಆರ್‌ಪಿ: ಜೂನ್.12ಕ್ಕೆ ಗಡುವು

ಹೆಚ್‌ಎಸ್‌ಆರ್‌ಪಿ: ಜೂನ್.12ಕ್ಕೆ ಗಡುವು

ಬೆಂಗಳೂರು: ಹಳೇ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್ ಆದೇಶದ ಅನ್ವಯ ಜೂನ್ ೧೨ರವರೆಗೆ ಇರಲಿದೆ.

ಅದರ ಒಳಗೆ ಎಲ್ಲ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ. ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಮೇ ೩೧ರವರೆಗೆ ವಿಧಿಸಲಾಗಿರುವ ಗಡುವನ್ನು ವಿಸ್ತರಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಬಿಎನ್‌ಡಿ ಎನರ್ಜಿ ಲಿಮಿಟೆಡ್ ಕಂಪನಿಯು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಪ್ರಕರಣದ ವಿಚಾರಣೆಯು ಜೂನ್ ೧೧ಕ್ಕೆ ನಿಗದಿಯಾಗಿದೆ ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ ಹೈಕೋರ್ಟ್‌ಗೆ ತಿಳಿಸಿದ್ದರು.

ಹಾಗಾಗಿ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳದ ವಾಹನಗಳ ಮೇಲೆ ಜೂನ್ ೧೨ರ ವರೆಗೆ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಸೂಚಿಸಿತ್ತು. ಇದರಿಂದ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳುವವರಿಗೆ ಹೆಚ್ಚುವರಿಯಾಗಿ ೧೨ ದಿನಗಳ ಅವಕಾಶ ಸಿಕ್ಕಿದೆ. ಈ ಸಮಯವನ್ನು ಬಳಸಿಕೊಳ್ಳಬೇಕು. ಜೂನ್ ೧೨ರ ನಂತರ ಅವಧಿ ವಿಸ್ತರಣೆ ಅಥವಾ ಇನ್ಯಾವುದೇ ಕ್ರಮಗಳ ಬಗ್ಗೆ ಹೈಕೋರ್ಟ್ ಆದೇಶ ಮತ್ತು ಸರ್ಕಾರದ ನಿರ್ಧಾರಗಳನ್ನು ಅವಲಂಬಿಸಿದೆ ಎಂದು ಸಾರಿಗೆ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ ತಿಳಿಸಿದ್ದಾರೆ. ೨೦೧೯ರ ಏಪ್ರಿಲ್ ೧ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕು. ರಾಜ್ಯದಲ್ಲಿ ಇಲ್ಲಿಯವರೆಗೆ ಸುಮಾರು ೪೫ ಲಕ್ಷ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಂಡಿದ್ದು, ೧.೫೫ ಕೋಟಿ ವಾಹನಗಳು ಇನ್ನೂ ಅಳವಡಿಸಿಕೊಂಡಿಲ್ಲ ಎಂದು ಮಾಹಿತಿ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular