Monday, April 14, 2025
Google search engine

Homeರಾಜ್ಯಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ

ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ

ಬೆಂಗಳೂರು: ೨೦೧೯ರ ಏಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ(ಎಚ್‌ಎಸ್‌ಆರ್‌ಪಿ) ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ಮತ್ತೊಮ್ಮೆ ಗಡುವು ವಿಸ್ತರಣೆ ಮಾಡಿದೆ.

ಬರೋಬ್ಬರಿ ನಾಲ್ಕು ಬಾರಿ ಗಡವು ವಿಸ್ತರಿಸಿದರೂ ಬಹುತೇಕ ವಾಹನ ಮಾಲೀಕರು ಇನ್ನೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಇಂದು ಮತ್ತೊಮ್ಮೆ ಗಡುವು ವಿಸ್ತರಣೆ ಮಾಡಿದ್ದು, ಈ ತಿಂಗಳು ಕೊನೆಯವರೆಗೆ ಅಂದರೆ ನವೆಂಬರ್ ೩೦ರವರೆಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಮಯ ನೀಡಿ ಆದೇಶ ಹೊರಡಿಸಿದೆ. ಒಂದು ವೇಳೆ ನವೆಂಬರ್ ೩೦ರೊಳಗೆ ನಂಬರ್ ಪ್ಲೇಟ್ ಬದಲಾವಣೆ ಮಾಡಿಕೊಳ್ಳದಿದ್ದರೆ ಡಿಸೆಂಬರ್ ೧ರಿಂದ ದಂಡ ವಿಧಿಸಲು ಸಾರಿಗೆ ಇಲಾಖೆ ತೀರ್ಮಾನಿಸಿದೆ.

ದ್ವಿಚಕ್ರ ವಾಹನಗಳು, ಆಟೋ ಮತ್ತು ನಾಲ್ಕು ಚಕ್ರಗಳ ವಾಹನಗಳು ಸೇರಿದಂತೆ ರಾಜ್ಯದ ಎಲ್ಲಾ ವಾಹನಗಳಿಗೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವುದನ್ನು ಕಡ್ಡಾಗೊಳಿಸಲಾಗಿದೆ. ವಂಚನೆ ಮತ್ತು ಕಳ್ಳತನದಿಂದ ರಕ್ಷಿಸಲು ಹೆಚ್ಚುವರಿ ಭದ್ರತಾ ಕ್ರಮಗಳನ್ನು ಒಳಗೊಂಡಿರುವ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅನ್ನು ಕಡ್ಡಾಯಾವಾಗಿ ಅಳವಡಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

RELATED ARTICLES
- Advertisment -
Google search engine

Most Popular