Thursday, April 3, 2025
Google search engine

Homeರಾಜ್ಯಸುದ್ದಿಜಾಲಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

ಮಂಗಳೂರು (ದಕ್ಷಿಣ ಕನ್ನಡ): ಚಲನಚಿತ್ರರಂಗದ ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಇಂದು ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು.

ಪ್ರಭುದೇವ್ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ತದನಂತರ ದೇವಳದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪ್ರಭುದೇವ ದಂಪತಿ ಯವರನ್ನು ಶಾಲು ಹೊಂದಿಸಿ ಫಲಪುಷ್ಪ ನೀಡಿ ಗೌರವಿಸಿದರು .ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್, ಮುಂತಾದವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular