ಹುಬ್ಬಳ್ಳಿ: ಮಹಾನಗರ ಪಾಲಿಕೆ ಟಿಪ್ಪರ್ ಹರಿದು ಬಾಲಕಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಸೋನಿಯಾಗಾಂಧಿ ನಗರದಲ್ಲಿ ನಡೆದಿದೆ.
ಹಮೀದಾಬಾನು ಕಬಾಡೆ (06) ಮೃತ ಬಾಲಕಿ. ರಸ್ತೆ ಪಕ್ಕದಲ್ಲೇ ಇದ್ದ ಬಾಲಕಿಯ ಮೇಲೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ತ್ಯಾಜ್ಯ ವಿಲೇವಾರಿ ಟಿಪ್ಪರ್ ಹರಿದು ಹಮೀದಾಬಾನು ಮೃತಪಟ್ಟಿದ್ದಾಳೆ.
ಟಿಪ್ಪರ್ ಚಾಲಕನ ನಿರ್ಲಕ್ಷ್ಯಕ್ಕೆ ಹಮೀದಾಬಾನು ಮೃತಪಟ್ಟಿದ್ದಾಳೆ ಎಂದು ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.