ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿಗೆ ಭರ್ಜರಿ ಗೆಲುವು ಹಿನ್ನೆಲೆ ಉರುಳು ಸೇವೆ ಮಾಡುವ ಮೂಲಕ ಜೆಡಿಎಸ್ ಮುಖಂಡ ಹರಕೆ ತೀರಿಸಿದ್ದಾರೆ.
ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಪುಟ್ಟಸ್ವಾಮಿ ಮಾರೇಹಳ್ಳಿ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಉರುಳು ಸೇವೆ ಮಾಡಿದ್ದಾರೆ.
ಈ ಹಿಂದೆ ಕುಮಾರಸ್ವಾಮಿ ಗೆದ್ದರೇ ಉರುಳು ಸೇವೆ ಮಾಡುವುದಾಗಿ ಹರಕೆ ಹೊತ್ತಿದ್ದರು.
ಕುಮಾರಸ್ವಾಮಿಗೆ ಗೆಲುವು ಸಿಕ್ಕಿದ ಹಿನ್ನೆಲೆ ಹರಕೆ ತೀರಿಸಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ.