Friday, April 11, 2025
Google search engine

Homeರಾಜ್ಯಸುದ್ದಿಜಾಲಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಹಣ ಎಣಿಕೆ ಕಾರ್ಯ: 1.64 ಕೋಟಿ ರೂ. ಹಣ ಸಂಗ್ರಹ

ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಹಣ ಎಣಿಕೆ ಕಾರ್ಯ: 1.64 ಕೋಟಿ ರೂ. ಹಣ ಸಂಗ್ರಹ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 1.64 ಕೋಟಿ ರೂ. ಸಂಗ್ರಹವಾಗಿದೆ.

ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಯವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು.

ಶ್ರಾವಣ ಮಾಸದ ಕುಂಬೋತ್ಸವ, ಅಮಾವಾಸ್ಯೆ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 1.64 ಕೋಟಿ ರೂ. ನಗದು, 21 ಗ್ರಾಂ ಚಿನ್ನ ಹಾಗೂ 2 ಕೆಜಿ 100 ಗ್ರಾಂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.

ಇದಲ್ಲದೆ ಇ-ಹುಂಡಿಯಿಂದ 2.89 ಲಕ್ಷ ರೂ. ನೇಪಾಳದ 5 ನೋಟು ಸೇರಿದಂತೆ ಚಲಾವಣೆಯಲ್ಲಿಲ್ಲದ 2 ಸಾವಿರ ರೂ. ಮುಖಬೆಲೆಯ 12 ನೋಟುಗಳು ಹುಂಡಿಯಲ್ಲಿ ಹಾಕಿದ್ದಾರೆ.

ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್ ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular