Friday, April 18, 2025
Google search engine

Homeರಾಜಕೀಯದೇವಸ್ಥಾನಗಳ ಹುಂಡಿ ಹಣ ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಮಾತ್ರ ಬಳಕೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ದೇವಸ್ಥಾನಗಳ ಹುಂಡಿ ಹಣ ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಮಾತ್ರ ಬಳಕೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ ವಿಚಾರವಾಗಿ ಬಿಜೆಪಿ ನಾಯಕ ಆರೋಪಕ್ಕೆ ತಿರುಗೇಟು ನೀಡಿದ ಅವರು,  ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು ಅಮಾಯಕ ಹಿಂದೂಗಳನ್ನು ನಮ್ಮ ಸರ್ಕಾರದ ವಿರುದ್ಧ ಎತ್ತಿಕಟ್ಟುವ ದುರುದ್ದೇಶದಿಂದ ಬಿಜೆಪಿ ನಾಯಕರು ಇಂತಹ ಕ್ಷುಲಕ ಪ್ರಯತ್ನ ಮಾಡುತ್ತಿದ್ದಾರೆ” ಎಂದು  ವಾಗ್ದಾಳಿ ನಡೆಸಿದ್ದಾರೆ.

ಈ ನಿಧಿಯು 2003ರಲ್ಲಿ ಕಾಯಿದೆಯು ಜಾರಿಗೆ ಬಂದಾಗಿನಿಂದ ಧಾರ್ಮಿಕ ಕಾರ್ಯಗಳಿಗೆ ಮಾತ್ರವೇ ಬಳಕೆಯಾಗುತ್ತಿದ್ದು ಭವಿಷ್ಯದಲ್ಲಿಯೂ ಅದಕ್ಕೆ ಮಾತ್ರವೇ ಬಳಕೆಯಾಗಲಿದೆ. ಬೇರೆ ಯಾವುದೇ ಧರ್ಮದ ಜನರ ಅನುಕೂಲಕ್ಕಾಗಿ ಈ ಹಣವನ್ನು ಬಳಸಲಾಗುವುದಿಲ್ಲ. ದೇವಸ್ಥಾನಗಳ ಹಣವನ್ನು ಕೇವಲ ಹಿಂದೂ ಸಮುದಾಯದ ಏಳಿಗೆ ಮತ್ತು ಕಲ್ಯಾಣಕ್ಕೆ ಮಾತ್ರವೇ ಬಳಸಬೇಕೆನ್ನುವ ಬಾಧ್ಯತೆಯನ್ನು ಈ ನಿಧಿಯ ನಿಬಂಧನೆಗಳಲ್ಲಿ ಒತ್ತಿ ಹೇಳಲಾಗಿದೆ  ಎಂದು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular