Monday, April 21, 2025
Google search engine

Homeಅಪರಾಧಹುಣಸೂರು: ಬೆಳ್ಳುಳ್ಳಿ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿ ಬಂಧನ

ಹುಣಸೂರು: ಬೆಳ್ಳುಳ್ಳಿ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿ ಬಂಧನ

ಹುಣಸೂರು:  ನಗರದ ಸಂತೆಮಾಳದಲ್ಲಿ ತರಕಾರಿ ವ್ಯಾಪಾರಿ ಮಹಮದ್ ಅಜರ್‌ ರಿಗೆ ಸೇರಿದ ಗೋಡೌನ್‌ ನ ಬೀಗ ಒಡೆದು ಬೆಳ್ಳುಳ್ಳಿ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿ, ಬೆಳ್ಳುಳ್ಳಿ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದ ಶಬ್ಬೀರ್‌ ನಗರದ ನಿವಾಸಿ, ಪ್ರಸ್ತುತ ಬೆಂಗಳೂರಿನ ಡಿ.ಜೆ.ಹಳ್ಳಿಯಲ್ಲಿ ವಾಸವಾಗಿರುವ ಮಹಮದ್‌ ಅಜರ್ ಬಂಧಿತ ಆರೋಪಿ.

ಘಟನೆಯ ವಿವರ: ಇತ್ತೀಚೆಗೆ ಸಂತೆ ಮಾಳದ ವ್ಯಾಪಾರಿ ಮಹಮದ್ ಅನ್ಸರ್ ರಿಗೆ ಸೇರಿದ ಗೋಡೌನ್ ಬೀಗ ಒಡೆದು ಒಂದು ಲಕ್ಷ ರೂ. ಬೆಲೆ ಬಾಳುವ ಬೆಳ್ಳುಳ್ಳಿಯನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಡಿವೈಎಸ್‌ ಪಿ ಗೋಪಾಲಕೃಷ್ಣ, ಇನ್ಸ್ಪೆಕ್ಟರ್ ದೇವೇಂದ್ರ ನೇತೃತ್ವದಲ್ಲಿ ತಂಡ ರಚಿಸಿದ್ದರು. ಮೊಬೈಲ್ ಲೊಕೇಶನ್ ಜಾಡು ಹಿಡಿದು ಕಾರ್ಯಾಚರಣೆಗಿಳಿದ ನಗರ ಠಾಣೆ ಪೊಲೀಸರು ಆರೋಪಿ ಬೆಂಗಳೂರಿನ ಡಿ.ಜೆ. ಹಳ್ಳಿಯಲ್ಲಿರುವುದನ್ನು ಪತ್ತೆ ಮಾಡಿ ಆರೋಪಿಯನ್ನು ಬಂಧಿಸಿ, ವಿವಿದೆಡೆ ಮಾರಾಟ ಮಾಡಿದ್ದ ಬೆಳ್ಳುಳ್ಳಿಯನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಎಎಸ್‌ ಐ ಪುಟ್ಟನಾಯಕ, ಸಿಬ್ಬಂದಿಗಳಾದ ಪ್ರಭಾಕರ್, ಅರುಣ, ಮನೋಹರ್, ಅನಿಲ್ ಮತ್ತಿತರರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular