ಹುಣಸೂರು: ತಾಲ್ಲೂಕಿನ ಕನಿಷ್ಠ ನೂರಕ್ಕೆ 80 ರಷ್ಟು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿರುವ ಜಾಗಗಳಲ್ಲಿ ರಾಮ ಮಂದಿರದ ಪವಿತ್ರ ಮಂತ್ರಾಕ್ಷತೆ ವಿತರಣಾ ಮಾಡಲಾಯಿತು.
ಜನವರಿ 22ರಂದು ರಾಮಮಂದಿರ ಲೋಕಾರ್ಪಣೆಯ ಹಿನ್ನೆಲೆಯಲ್ಲಿ ಅಯೋಧ್ಯೆಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆಯನ್ನು ದೇಶಾದ್ಯಂತ ಎಲ್ಲ ಹಿಂದೂಗಳ ಮನೆಗೂ ವಿತರಿಸುವ ಅಭಿಯಾನ ನಡೆಯುತ್ತಿದೆ.

ವಿಶ್ವಹಿಂದೂ ಪರಿಷತ್ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿವಿಧ ಪರಿವಾರ ಸಂಘಟನೆಗಳು ಭಾರತದಲ್ಲಿರುವ ಸಮಸ್ತ ಹಿಂದೂ ಮನೆಗಳಿಗೆ ಕರಪತ್ರ, ಅಯೋಧ್ಯೆ ರಾಮಮಂದಿರದ ಭಾವಚಿತ್ರ ಹಾಗೂ ರಾಮನ ಪವಿತ್ರ ಮಂತ್ರಾಕ್ಷತೆಯನ್ನು ಮನೆಮನೆಗಳಿಗೆ ಹಂಚುವ ಅಭಿಯಾನ ಕೈಗೊಂಡಿದ್ದಾರೆ.