Friday, January 30, 2026
Google search engine

Homeಸ್ಥಳೀಯಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನ ಕೊಂದು ಆತ್ಮಹತ್ಯೆಗೆ ಶರಣಾದ ಪತಿ

ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನ ಕೊಂದು ಆತ್ಮಹತ್ಯೆಗೆ ಶರಣಾದ ಪತಿ

ರಾಮನಗರ: ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನ ಕೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ತಾಲೂಕಿನ ಹಾಗಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ನವೀನ್ ಕುಮಾರ್ (35), ವತ್ಸಲ(30) ಮೃತ ದಂಪತಿ. ನವೀನ್ ಹಾಗೂ ವತ್ಸಲ ಕಳೆದ 8 ವರ್ಷಗಳ ಹಿಂದೆ ಮದುವೆಯಾಗಿದ್ದರು. ಈ ದಂಪತಿಗೆ 7 ವರ್ಷದ ಹೆಣ್ಣುಮಗು ಇದೆ. ಸಣ್ಣಪುಟ್ಟ ವಿಚಾರಕ್ಕೆ ಪತಿ, ಪತ್ನಿ ಜಗಳವಾಡುತ್ತಿದ್ದರು. ಕಳೆದ ವಾರ ದಂಪತಿ ಗಲಾಟೆ ಮಾಡಿಕೊಂಡು ಮಹಿಳಾ ಠಾಣೆ ಮೆಟ್ಟಿಲೇರಿದ್ದರು. ಇಂದು ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯನ್ನ ಕತ್ತುಹಿಸುಕಿ ಕೊಂದ ಪತಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

RELATED ARTICLES
- Advertisment -
Google search engine

Most Popular