ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಬೇಕು ಎಂಬ ಆಕಾಂಕ್ಷೆ ಹೊಂದಿದ್ದೇನೆ. ಈ ಬಗ್ಗೆ ಹೈಕಮಾಂಡ್ ಹೇಳಿದರೆ ಸ್ಪರ್ಧೆ ಮಾಡುತ್ತೇನೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ಅವರು ಶಿವಮೊಗ್ಗದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.
ಮಂತ್ರಿ ಆದವರು ಯಾಕೆ ಸ್ಪರ್ಧೆ ಮಾಡಬಾರದಾ ಎಂದು ಪ್ರಶ್ನಿಸಿದ ಅವರು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡೋದು ನನ್ನ ಸ್ವಇಚ್ಛೆ ಎಂದರು.
ಸಹಕಾರ ಸಪ್ತಾಹದಲ್ಲಿ ಎಲ್ಲಾ ಸಹಕಾರಿಗಳು ಸೇರಿ ಆಚರಣೆ ಮಾಡಬೇಕು. ಸಹಕಾರ ರಂಗದಲ್ಲಿ ರಾಜಕಾರಣ ಇರಬಾರದು ಎಂದು ಹೇಳಿದರು.