Friday, April 11, 2025
Google search engine

Homeರಾಜ್ಯನಾನು ಆರೋಗ್ಯವಾಗಿದ್ದೇನೆ, ಯಾರೂ ಆತಂಕ ಪಡಬೇಡಿ: ಎಸ್.ಸುರೇಶ್ ಕುಮಾರ್ ಸ್ಪಷ್ಟನೆ

ನಾನು ಆರೋಗ್ಯವಾಗಿದ್ದೇನೆ, ಯಾರೂ ಆತಂಕ ಪಡಬೇಡಿ: ಎಸ್.ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು: ನಾನು ಆರೋಗ್ಯವಾಗಿದ್ದೇನೆ. ಯಾರೂ ಅಂತಕ ಪಡಬೇಡಿ ಎಂಬುದಾಗಿ ಮಾಜಿ ಶಿಕ್ಷಣ ಸಚಿವ, ಹಾಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಮಾಧ್ಯಮಗಳಲ್ಲಿ ತಮ್ಮ ಅನಾರೋಗ್ಯ ಕುರಿತಂತೆ ಪ್ರಸಾರವಾಗುತ್ತಿರುವ ವದಂತಿಗಳನ್ನು ನಂಬುವುದು ಬೇಡ. ನಾನು ಆರೋಗ್ಯವಾಗಿದ್ದೇನೆ ಎಂದು ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ನನಗೆ ಕೆಲ ದಿನಗಳಿಂದ ಚಿಕೂನ್ ಗುನ್ಯಾ ಬಾಧಿಸಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದೇನೆ. ಜ್ವರದಿಂದ ಈಗ ಸಂಪೂರ್ಣ ಚೇತರಿಕೆ ಕಂಡಿದ್ದು, ಗುಣಮುಖನಾಗಿದ್ದೇನೆ ಎಂದಿದ್ದಾರೆ. ಸದ್ಯಕ್ಕೆ ವಿಶ್ರಾಂತಿಯಲ್ಲಿದ್ದೇನೆ. ಕಾಳಜಿ ಹೊಂದಿರುವ ತಮ್ಮ ಹಿತೈಶಿಗಳು ಅನಗತ್ಯ ಆತಂಕಕ್ಕೆ ಒಳಗಾಗುವುದು ಬೇಡ ಎಂದು ರಾಜಾಜಿನಗರ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular