ಕಲಬುರಗಿ: ಕಲಬುರಗಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿ ಮಾಡಲು ತಾವು ಕಂಕಣಬದ್ಧರಾಗಿದ್ದು ಒಂದು ಅವಕಾಶ ನೀಡಿ ಸಂಸದರನ್ನಾಗಿ ಆಯ್ಕೆ ಮಾಡಿದರೆ ನಿಮ್ಮ ಸೇವೆ ಮಾಡುವುದಾಗಿ ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಹೇಳಿದರು.
ಆತನೂರು ಗ್ರಾಮದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಮತಯಾಚನೆ ಮಾಡಿ ಮಾತನಾಡುತ್ತಿದ್ದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿವೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 25 ಗ್ಯಾರಂಟಿಗಳನ್ನು ದೇಶದ ಜನರಿಗೆ ತಲುಪಿಸಲಾಗುವುದು ಎಂದು ಅವರು ಹೇಳಿದರು.
ಸಿಎಂ ಸಲಹೆಗಾರ ಹಾಗೂ ಶಾಸಕ ಬಿ.ಆರ್.ಪಾಟೀಲ್ ಮಾತನಾಡಿ ಮೋದಿ ಬಡವರ ರೈತರ ಪರವಾಗಿಲ್ಲ. ಅವರು ಈ ದೇಶದ ಶ್ರೀಮಂತರ ಪರವಾಗಿದ್ದಾರೆ. ರೈತರ ಸಾಲ ಮನ್ನಾ ಮಾಡುವಂತೆ ಕೇಳಿದರೂ ರೈತರ ಪರ ನಿರ್ಧಾರ ತೆಗೆದುಕೊಳ್ಳಲಿಲ್ಲ ಎಂದು ದೂರಿದರು.
ಎಮ್ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು ಮಾತನಾಡಿ ಜನ ಪರ ಕಾಳಜಿಯ ವ್ಯಕ್ತಿ ರಾಧಾಕೃಷ್ಣ ಅವರಿಗೆ ಮತ ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದು ಮನವಿ ಮಾಡಿ ಎಂದರು.
ಶಾಸಕ ಎಂ ವೈ ಪಾಟೀಲ ಮಾತನಾಡಿ ಕಾಂಗ್ರೆಸ್ ಪಕ್ಷ ಬಡವರ ಪಕ್ಷ. ಬಿಜೆಪಿ ಸರ್ಕಾರ ಬರೀ ಸುಳ್ಳುಗಳನ್ನೇ ಹೇಳಿಕೊಂಡು ಕಾಲ ಕಳೆದಿದೆ. ಈಗ ನೀವೆಲ್ಲ ಆಶೀರ್ವಾದ ಮಾಡಿದರ ಮತ್ತೆ ಜನಪರ ಕಾಳಜಿಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು.