ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ತಟಸ್ಥ ಎಂದು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ನಾನು ಈ ಚುನಾವಣೆಯಲ್ಲಿ ತಟಸ್ಥವಾಗಿರಲು ನಿರ್ಧರಿಸಿದ್ದೇನೆ. ಸಾಕಷ್ಟು ಬೇರೆ ಬೇರೆ ವಿಚಾರಗಳಿವೆ. ಅದನ್ನು ಸೂಕ್ತ ಸಂದರ್ಭದಲ್ಲಿ ಮಾತನಾಡುತ್ತೇನೆ ಎಂದರು.
ಮೊನ್ನೆ ನಮ್ಮ ಸಚಿವ ಎನ್.ಚಲುವರಾಯಸ್ವಾಮಿ ಸಹ ಸಭೆ ಕರೆದಿದ್ರು. ನಮ್ಮಲ್ಲಿ ಸ್ವಲ್ಪ ಗೊಂದಲಗಳಿದ್ದು, ಅವುಗಳು ನಿವಾರಣೆಯಾಗಬೇಕು. ಅವರ ಜೊತೆ ಗೊಂದಲಗಳ ನಿವಾರಣೆ ಬಗ್ಗೆ ಮಾತನಾಡಿದ್ದೇನೆ. ನಿವಾರಣೆಯಾದ ಬಳಿಕ ನಾನು ಮಾತನಾಡುತ್ತೇನೆ ಎಂದು ಹೇಳಿದರು.
ಸಂಸದೆ ಸುಮಲತಾ ಕಾಂಗ್ರೆಸ್ ಗೆ ಸೇರ್ಪಡೆ ವಿಚಾರವಾಗಿ ಮಾತನಾಡಿ, ಬೇರೆಯವರು ಪಕ್ಷಕ್ಕೆ ಬರುವ ಬಗ್ಗೆ ನನಗೆ ಗೊತ್ತಿಲ್ಲ. ಚುನಾವಣೆಗೆ ನಾನು ಅಭ್ಯರ್ಥಿಯಲ್ಲ, ಆದರೆ ಈ ಚುನಾವಣೆಯಲ್ಲಿ ತಟಸ್ಥವಾಗಿರಬೇಕೆಂದು ತೀರ್ಮಾನ. ಬೇರೆ ಬೇರೆ ಕಾರಣ ಇವೆ. ಈ ಚುನಾವಣೆಯಲ್ಲಿ ತಟಸ್ಥವಾಗಿರ್ತೇನೆ. ಅದಕ್ಕೆ ಕಾರಣವನ್ನು ಮುಂದಿನ ದಿನದಲ್ಲಿ ಹೇಳುತ್ತೇನೆ ಎಂದರು.