Wednesday, June 11, 2025
Google search engine

Homeಸ್ಥಳೀಯರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು ಬಿಜೆಪಿ-ಜೆಡಿಎಸ್ ಷಡ್ಯಂತ್ರಕ್ಕೆ ಹೆದರಲ್ಲ: ಸಿಎಂ ಸಿದ್ದರಾಮಯ್ಯ

ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು ಬಿಜೆಪಿ-ಜೆಡಿಎಸ್ ಷಡ್ಯಂತ್ರಕ್ಕೆ ಹೆದರಲ್ಲ: ಸಿಎಂ ಸಿದ್ದರಾಮಯ್ಯ


ವರುಣಾ: ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು ಬಿಜೆಪಿ-ಜೆಡಿಎಸ್ ಷಡ್ಯಂತ್ರಕ್ಕೆ ಹೆದರಲ್ಲ. ಎಲ್ಲಾ ಷಡ್ಯಂತ್ರ ಸೋಲಿಸುತ್ತೇನೆ. ಅವರ ಆಟಗಳಿಗೆ ಜಗ್ಗಲ್ಲ, ಬಗ್ಗಲ್ಲ. ಸಾಮಾಜಿಕ ನ್ಯಾಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ೫೦೧.೮೧ ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿ ಮಾತನಾಡಿದರು.ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ ಆಗಿದ್ದೇನೆ. ವರುಣಾ ಕಾಂಗ್ರೆಸ್ಸಿನ ಭದ್ರ ಕೋಟೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗಿಂತ ಹೆಚ್ಚು ಮತ ಕೊಟ್ಟಿದ್ದೀರಿ. ನನಗೆ ವಿಶೇಷವಾಗಿ ಆಶೀರ್ವಾದ ಮಾಡಿದ್ದಕ್ಕಾಗಿ ನಾನು ಕ್ಷೇತ್ರದ ಮತದಾರರಿಗೆ ಅನಂತ ಅನಂತ ಧನ್ಯವಾದ ಅರ್ಪಿಸಿದರು.

ವರುಣಾ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಅನುದಾನ ಕೊಡಲಾಗುತ್ತಿದೆ. ನಾನು ಉಪಕಾರ ಮಾಡುತ್ತಿಲ್ಲ. ಕ್ಷೇತ್ರದ ಪ್ರತಿನಿಧಿಯಾಗಿ ಅಭಿವೃದ್ಧಿ ಮಾಡುವ ನನ್ನ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇನೆ ಎಂದರು. ಕೇಂದ್ರದಲ್ಲಿರುವ ಮೋದಿ ಸರ್ಕಾರವಾಗಲಿ, ರಾಜ್ಯದಲ್ಲಿದ್ದ ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ಜನರ ಕಲ್ಯಾಣ ಮಾಡದೆ ಲೂಟಿ ಮಾಡಿ ಹೋದರು ಎಂದರು.ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿ. ಬಡವರ ವಿರೋಧಿ. ಮೂರು ಬಾರಿ ಪ್ರಧಾನಿ ಆಗಿರುವ ಮೋದಿ ಕೊಟ್ಟ ಮಾತಿನಂತೆ ನಡೆದ ಉದಾಹರಣೆ ಇದೆಯಾ ಹೇಳಿ. ಇಷ್ಟು ವರ್ಷ ಪ್ರಧಾನಿಯಾಗಿ ಮೋದಿ ಬಡಪರ ಪರವಾಗಿ ಒಂದೇ ಒಂದು ಯೋಜನೆ ಜಾರಿ ಮಾಡಿದ್ದಾರಾ ಹೇಳಿ ಅಂದರು.

ಕೇಂದ್ರದಿಂದ ರಾಜ್ಯಕ್ಕೆ ನಿರಂತರ ದ್ರೋಹ.ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಕಟ್ಟುವವರು ನಾವು. ನಾವು ನಮ್ಮ ಪಾಲಿನ ತೆರಿಗೆ ಪಡೆಯಲು ಭಿಕ್ಷೆ ಬೇಡಬೇಕಾ? ಮೊನ್ನೆ ಉತ್ತರ ಪ್ರದೇಶ, ಬಿಹಾರ ರಾಜ್ಯಗಳಿಗೆ ಅತಿ ಹೆಚ್ಚು ತೆರಿಗೆ ಪಾಲು ಕೊಟ್ಟಿರುವ ಕೇಂದ್ರಕ್ಕೆ ರಾಜ್ಯಕ್ಕೆ ಮಾತ್ರ ಕೇವಲ ಆರು ಸಾವಿರ ಕೋಟಿ ಕೊಟ್ಟು ಭಯಾನಕ ಅನ್ಯಾಯ ಮಾಡಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಒಂದೇ ಒಂದು ರೂಪಾಯಿ ಲಂಚ ಪಡೆದ ಉದಾಹರಣೆ ಇದೆಯಾ: ನನ್ನ ಮೇಲಿನ ಸುಳ್ಳು ಆರೋಪ ಸಹಿಸ್ತೀರಾ ಎಂದು ಪ್ರಶ್ನಿಸಿದರು.ನಾನು ಮಂತ್ರಿಯಾಗಿ ೪೫ ವರ್ಷ ಆಯ್ತು. ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ಹಿಂದುಳಿದ ವರ್ಗದ ನಾನು ಎರಡು ಬಾರಿ ಸಿಎಂ ಆದೆ ಅಂತ ಬಿಜೆಪಿಗೆ ಹೊಟ್ಟೆಕಿಚ್ಚು. ಇದನ್ನು ನೀವು ಸಹಿಸ್ತೀರಾ ಎಂದು ಮರು ಪ್ರಶ್ನಿಸಿದರು.ನಾನು ಎರಡು ಬಾರಿ ಸಿಎಂ ಆಗಿ ಮೈಸೂರಲ್ಲಿ ಒಂದೂ ಮನೆ ಇಲ್ಲ. ಮರಿಸ್ವಾಮಿ ಮನೇಲಿ ಇದೀನಿ. ಕುವೆಂಪು ರಸ್ತೇಲಿ ೩ ವರ್ಷದಿಂದ ಮನೆ ಕಟ್ಟುತ್ತಲೇ ಇದ್ದೀನಿ. ಇದುವರೆಗೂ ಪೂರ್ತಿ ಆಗಿಲ್ಲ. ನನಗೆ ವರ್ಚಸ್ಸು ಕೊಡುವವರು ನೀವು. ನಿಮ್ಮ ಎದುರಿಗೆ ಪ್ರಾಮಾಣಿಕವಾಗಿ ಇದ್ದೇನೆ ಎಂದರು.

ನೀವೇ ನನ್ನ ಮಾಲೀಕರು. ನೀವೇ ನನ್ನ ಯಜಮಾನರು. ನಿಮ್ಮ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದರು.ಬಿಜೆಪಿ-ಜೆಡಿಎಸ್ ನಾಯಕರ ಹೊಟ್ಟೆಕಿಚ್ಚಿನಿಂದ ನನ್ನ ವರ್ಚಸ್ಸು ಕಡಿಮೆ ಆಗಲ್ಲ. ನನ್ನ ವರ್ಚಸ್ಸು ವರುಣಾ ಜನತೆ, ನನ್ನ ವರ್ಚಸ್ಸು ರಾಜ್ಯದ ಜನತೆ ಎಂದರು.

RELATED ARTICLES
- Advertisment -
Google search engine

Most Popular