Friday, April 4, 2025
Google search engine

Homeರಾಜ್ಯನಾನು ಯಾವುದೇ ಅಧಿಕಾರಕ್ಕೆ ಅಂಟಿಕೊಂಡು ಕೂತಿಲ್ಲ : ಡಿಕೆ ಶಿವಕುಮಾರ್

ನಾನು ಯಾವುದೇ ಅಧಿಕಾರಕ್ಕೆ ಅಂಟಿಕೊಂಡು ಕೂತಿಲ್ಲ : ಡಿಕೆ ಶಿವಕುಮಾರ್

ಬೆಂಗಳೂರು : ಒಂದು ಕಡೆ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡಬೇಕು ಹೇಳಿಕೆ ನೀಡಿದ್ದರೆ ಇನ್ನೊಂದು ಕಡೆ ಇಂದು ಬೆಳಗಾವಿಗೆ ಆಗಮಿಸಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜಿವಾಲ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾವುದೇ ಕಾರಣಕ್ಕೂ ಬದಲಾಗಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದರ ಮಧ್ಯ ಡಿಸಿಎಂ ಡಿಕೆ ಶಿವಕುಮಾರ್ ನಾನು ಯಾವುದೇ ಅಧಿಕಾರಕ್ಕೆ ಅಂಟಿಕೊಂಡು ಕೂತಿಲ್ಲ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ನಾನು ಯಾವುದೇ ಅಧಿಕಾರಕ್ಕೆ ಅಂಟಿಕೊಂಡು ಕೂತಿಲ್ಲ. ಅವರವರ ಶ್ರಮದ ಮೇಲೆ ಹುದ್ದೆಗಳು ಸಿಗುತ್ತವೆ. ನಾಯಕತ್ವ ಗುಣದ ಮೇಲೆ ಅವಕಾಶ ಸಿಗುತ್ತವೆ ಅವರ ಸಾಧನೆ, ಆಧಾರದ ಮೇಲೆ ಅವಕಾಶಗಳು ಸಿಗುತ್ತವೆ. ಎಂದು ಅವರು ತಿಳಿಸಿದರು.

ಹುದ್ದೆಗಳ ಬಗ್ಗೆ ಹೊರಗೆ ಮಾತನಾಡುವುದು ಸರಿಯಲ್ಲ. ಪಕ್ಷದ ಚೌಕಟ್ಟಿನಲ್ಲಿ ಈ ಬಗ್ಗೆ ಚರ್ಚೆ ಮಾಡಲಾಗುತ್ತದೆ. ರಾಜ್ಯದ ಎಲ್ಲಾ ವಿಚಾರಗಳ ಬಗ್ಗೆ ನಮ್ಮ ನಾಯಕರಿಗೆ ಮಾಹಿತಿ ಇದೆ. ಕರ್ನಾಟಕದವರೇ ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಅವರಿಗೆ ಎಲ್ಲ ಮಾಹಿತಿ ಇದೆ. ಜನವರಿ 21ರಂದು ಗಾಂಧಿ ಕಾಂಗ್ರೆಸ್ ಸಮಾವೇಶ ನಡೆಯುತ್ತಿದ್ದು, ಪಕ್ಷದ ಎಲ್ಲಾ ವಿಚಾರಗಳ ಕುರಿತು ಚರ್ಚಿಸಲಾಗುತ್ತದೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

RELATED ARTICLES
- Advertisment -
Google search engine

Most Popular