ಚನ್ನಪಟ್ಟಣ: ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ನಾನೇ ಮೈತ್ರಿ ಪಕ್ಷದ ಅಭ್ಯರ್ಥಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕಳೆದ ವಾರ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೆ. ಶೀಘ್ರ ಅಭ್ಯರ್ಥಿ ಹೆಸರು ಸೂಚಿಸುವಂತೆ ಕೇಳಿದ್ದೇನೆ.
ಕುಮಾರಸ್ವಾಮಿ ಅವರು ನನ್ನನ್ನೇ ಸ್ಪರ್ಧಿಸುವಂತೆ ತಿಳಿಸಿದ್ದಾರೆ. ಅದಕ್ಕೆ ಅಧಿಕೃತ ಅನುಮೋದನೆಯನ್ನು ಅವರೇ ಕೊಡಬೇಕು. ಪತ್ರಿಕಾಗೋಷ್ಠಿ ಕರೆದು ಹೆಸರು ಘೋಷಣೆ ಮಾಡುವಂತೆ ಅವರಲ್ಲಿ ಮನವಿ ಮಾಡಿದ್ದೇನೆ’ ಎಂದರು.
‘ಈಗಾಗಲೇ ಕಾಂಗ್ರೆಸ್ ಉಪ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸೋಮವಾರದಿಂದ ತಾಲ್ಲೂಕಿನಲ್ಲಿ ಚುನಾವಣೆ ಪ್ರಕ್ರಿಯೆ ಆರಂಭಿಸುತ್ತೇನೆ. ನನ್ನ ಹೆಸರು ಅಧಿಕೃತ ಅನುಮೋದನೆಗಾಗಿ ನಾನು ಕಾಯುತ್ತಿದ್ದೇನೆ’ ಎಂದರು.