ಬಿಡದಿ: ಚನ್ನಪಟ್ಟಣ ಕ್ಷೇತ್ರದ ಮತದಾರರ ತೀರ್ಪಿಗೆ ನಾನು ತಲೆಬಾಗಿದ್ದೇನೆ. ಅವರು ಕೊಟ್ಟ ತೀರ್ಪನ್ನು ನಾನು ಒಪ್ಪಿಕೊಳ್ಳುತ್ತಿದ್ದೇನೆ. ಚುನಾವಣೆಯ ಸಂದರ್ಭದಲ್ಲಿ ದುಡಿದಂತ ಎಲ್ಲರಿಗೂ ಧನ್ಯವಾದಗಳು ಅಂತ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಇಂದು ಬಿಡದಿಯ ತೋಟದ ಮನೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, 87 ಸಾವಿರ ಮತ ನೀಡಿದ ಚನ್ನಪಟ್ಟಣ ಜನತೆಗೆ ಧನ್ಯವಾದಗಳು. ಜೆಡಿಎಸ್, ಬಿಜೆಪಿ ಕಾರ್ಯಕರ್ತರಿಗೂ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಹೆಚ್ ಡಿಡಿ, ಹೆಚ್ ಡಿಕೆ ಬೆಳೆಸಿದ್ದು ರಾಮನಗರ ಜಿಲ್ಲೆಯ ಜನರು ಎಂದರು.
ನಾನು ರಾಮನಗರದಲ್ಲಿ ಜನಿಸಿಲ್ಲ. ಆದರೇ ಭಾವನಾತ್ಮಕ ಸಂಬಂಧವನ್ನು ಹೊಂದಿದ್ದೇನೆ. ನಾನು ಕುಮಾರಸ್ವಾಮಿ ಜೊತೆಗೆ ಸೇರಿ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯದಲ್ಲಿ ತೊಡಗಲಿದ್ದೇನೆ. ನಾನು ಚುನಾವಣೆಯ ಸಂದರ್ಭದಲ್ಲಿ ನೀಡಿದಂತ ಭರವಸೆ ಕೇವಲ ಚುನಾವಣೆಗೆ ಸಂಬಂಧಪಟ್ಟಿದ್ದು, ನಾನು ಕೊಟ್ಟ ಮಾತನ್ನು ಹಿಂಪಡೆಯಲು ಹೋಗಲ್ಲ ಎಂದರು.