Saturday, April 19, 2025
Google search engine

Homeರಾಜ್ಯಬಿಜೆಪಿಯಲ್ಲಿ ಶಿಸ್ತು ಸಮಿತಿ ಇದೆಯೇ ಗೊತ್ತಿಲ್ಲ: ಎಂ.ಪಿ ರೇಣುಕಾಚಾರ್ಯ ಕಿಡಿ

ಬಿಜೆಪಿಯಲ್ಲಿ ಶಿಸ್ತು ಸಮಿತಿ ಇದೆಯೇ ಗೊತ್ತಿಲ್ಲ: ಎಂ.ಪಿ ರೇಣುಕಾಚಾರ್ಯ ಕಿಡಿ

ದಾವಣಗೆರೆ: 11 ಜನರಿಗೆ ನೋಟಿಸ್ ನೀಡಿದ್ದೇವೆ ಎನ್ನುತ್ತಾರೆ. ಹೊರಗೆ ಬಂದು ನನಗೆ ಮಾತ್ರ ನೋಟಿಸ್ ನೀಡುತ್ತಾರೆ.  ಬಿಜೆಪಿಯಲ್ಲಿ ಶಿಸ್ತು ಸಮಿತಿ ಇದೆಯೇ ಗೊತ್ತಿಲ್ಲ ಎಂದು ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಮೋದಿ ವಿರುದ್ಧ ಮಾತನಾಡಿದ್ದೇನಾ..? ನನ್ನ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ ನೋಟಿಸ್ ಗೆ ಯಾವುದೇ ಉತ್ತರ ಕೊಡುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೇ ನಿಭಾಯಿಸಲು ಸಿದ್ಧ ಎಂದ ಎಂ.ಪಿ ರೇಣುಕಾಚಾರ್ಯ, ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ.  ಕಾಂಗ್ರೆಸ್ ಮುಖಂಡರ ಜೊತೆ ರಾಜಕೀಯ ಹೊರತಾದ ಸ್ನೇಹ ಸಂಬಂಧ ಇದೆ. ಶಾಮನೂರು ಶಿವಶಂಕರಪ್ಪ ಜೊತೆ ವಿಮಾನದಲ್ಲಿ ಹೋಗಿದ್ದೆ. ಸಮಯ ಕೇಳಿ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಬಳಿಯೂ ಚರ್ಚಿಸಿದ್ದೆ ಎಂದರು.

RELATED ARTICLES
- Advertisment -
Google search engine

Most Popular