ಬೆಂಗಳೂರು: ನನಗೂ ವಿನಯ್ ಸೋಮಯ್ಯ ಆತ್ಮಹತ್ಯೆಗೂ ಯಾವುದೇ ಸಂಬಂಧ ಇಲ್ಲ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ ಹೇಳಿದ್ದಾರೆ.
ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಅತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ ಮೃತ ವ್ಯಕ್ತಿ ಯಾರು ಎನ್ನುವುದೇ ಗೊತ್ತಿಲ್ಲ. ನಾನು ಯಾವುದೇ ಕಿರುಕುಳ ನೀಡಿಲ್ಲ ಎಂದು ತಿಳಿಸಿದರು.