Monday, April 21, 2025
Google search engine

Homeರಾಜಕೀಯಪ್ರಧಾನಿ ಮೋದಿ ಫೋಟೊ ಬಳಕೆಗೆ ನನಗೆ ಅವಕಾಶ ದೊರೆತಿದೆ: ಕೆ ಎಸ್ ಈಶ್ವರಪ್ಪ

ಪ್ರಧಾನಿ ಮೋದಿ ಫೋಟೊ ಬಳಕೆಗೆ ನನಗೆ ಅವಕಾಶ ದೊರೆತಿದೆ: ಕೆ ಎಸ್ ಈಶ್ವರಪ್ಪ

ಶಿವಮೊಗ್ಗ :  ಪ್ರಧಾನಿ ನರೇಂದ್ರ ಮೋದಿ ನನ್ನ ಹೃದಯದಲ್ಲಿ ಇದ್ದಾರೆ. ಅವರ ಫೋಟೊ ನಾನು ಬಳಸಬಾರದೆಂದು ಬಿಜೆಪಿ ಕೋರ್ಟ್​​ ಮೊರೆ ಹೋಗಿತ್ತು. ಆದರೆ ಪ್ರಧಾನಿಯ ಫೋಟೊ ಬಳಕೆಗೆ ನನಗೆ ಅವಕಾಶ ದೊರೆತಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತ್ರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಹೇಳಿದರು.

ಬಿಜೆಪಿಯವರು ಕೋರ್ಟ್ ಮತ್ತು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದರು. ಈಗ ಮೋದಿ ಫೋಟೊ ಬಳಕೆಗೆ ನನಗೆ ಅವಕಾಶ ಸಿಕ್ಕಿದೆ. ಇದರಿಂದ ಬಿಜೆಪಿಯವರಿಗೆ ಎರಡೂ ಕಡೆ ಹಿನ್ನಡೆ ಆಗಿದೆ. ನನಗೆ ಸಂತೋಷವಾಗಿದ ಎಂದು ಅವರು ಹೇಳಿದರು.

ಪ್ರಧಾನಿ ಮೋದಿಯವರ ಆದರ್ಶ ನನಗೆ ಮಾದರಿ. ಚುನಾವಣೆ ಗೆಲ್ಲಲು ಮೋದಿ ಫೋಟೋ ಅನುಕೂಲ ಆಗಲಿದೆ ಎಂದು ಅವರು ಹೇಳಿದರು.

ಬುಧವಾರ ಶಿರಾಳಕೊಪ್ಪದಲ್ಲಿ ನನ್ನ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದಾರೆ. ಬಿಎಸ್​ ಯಡಿಯೂರಪ್ಪ ಮತ್ತು ರಾಘವೇಂದ್ರ ಕುತಂತ್ರ ಮಾಡುತ್ತಿದ್ದಾರೆ. ಇದೇ ರೀತಿ ಮುಂದುವರಿಸಿದರೆ ತಕ್ಕ ಉತ್ತರ ನೀಡುತ್ತೇನೆ ಎಂದು ಈಶ್ವರಪ್ಪ ಎಚ್ಚರಿಕೆ ನೀಡಿದರು.

RELATED ARTICLES
- Advertisment -
Google search engine

Most Popular