Saturday, April 19, 2025
Google search engine

Homeರಾಜಕೀಯನನಗೂ ಹಾಸನದ ಪೆನ್‌ ಡ್ರೈವ್‌ ಬಿಡುಗಡೆ ಪ್ರಕರಣಕ್ಕೂ ಸಂಬಂಧ ಇಲ್ಲ: ಡಿ.ಕೆ. ಶಿವಕುಮಾರ್‌ ಸ್ಪಷ್ಟನೆ

ನನಗೂ ಹಾಸನದ ಪೆನ್‌ ಡ್ರೈವ್‌ ಬಿಡುಗಡೆ ಪ್ರಕರಣಕ್ಕೂ ಸಂಬಂಧ ಇಲ್ಲ: ಡಿ.ಕೆ. ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ನನಗೂ ಹಾಸನದ ಅಶ್ಲೀಲ ವೀಡಿಯೋಗಳ ಪೆನ್‌ ಡ್ರೈವ್‌ ಬಿಡುಗಡೆ ಪ್ರಕರಣಕ್ಕೂ ಸಂಬಂಧ ಇಲ್ಲ. ಬಿಜೆಪಿ ಕಾರ್ಯಕರ್ತ ದೇವರಾಜೇಗೌಡ ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರರಹಿತ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ದೇವರಾಜೇ ಗೌಡರ ಪತ್ರಿಕಾಗೋಷ್ಠಿಗೆ ಸ್ಪಷ್ಟನೆ ನೀಡಿದ ಅವರು, ದೇವರಾಜೇಗೌಡ ಹಿಂದೆ ಬಿಜೆಪಿಯಿಂದ ಚುನಾವಣೆಗೆ ನಿಂತಿದ್ದವರು. ಆ ಪಕ್ಷದ ಸಕ್ರಿಯ ಕಾರ್ಯಕರ್ತ. ಈಗ ಪ್ರಜ್ವಲ್‌ ಪ್ರಕರಣದಲ್ಲಿ ಜೆಡಿಎಸ್‌ ಜತೆಗೆ ಅದರ ಮಿತ್ರ ಪಕ್ಷ ಬಿಜೆಪಿಗೂ ಬಹಳ ಮುಜುಗರ ಮತ್ತು ಮುಖಭಂಗ ಆಗಿದೆ.

ಈಗ ಆಗಿರುವ ಹಾನಿ ಸರಿಪಡಿಸಿಕೊಳ್ಳಲು ಬಿಜೆಪಿ-ಜೆಡಿಎಸ್‌ ನಾಯಕರು ದೇವರಾಜೇಗೌಡನ ಮೂಲಕ ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿಸಿದ್ದಾರೆ ಎಂದು ಆಪಾದಿಸಿದ್ದಾರೆ.

ದೇವರಾಜೇಗೌಡ ಈ ಹಿಂದೆಯೇ ತಮ್ಮಲ್ಲಿ ಪೆನ್‌ ಡ್ರೈವ್‌ ಇರುವ ಬಗ್ಗೆ ಪತ್ರಿಕಾಗೋಷ್ಠಿ ಕರೆದಿದ್ದರು. ಬಿಜೆಪಿ ನಾಯಕರ ಅನುಮತಿ ಪಡೆದು ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಹೀಗಿರುವಾಗ ನನಗೂ ಪೆನ್‌ ಡ್ರೈವ್‌ ಬಿಡುಗಡೆಗೂ ಏನು ಸಂಬಂಧ? ಮಾಡುವುದೆಲ್ಲ ಮಾಡಿ ಈಗ ನನ್ನ ವಿರುದ್ಧ ಆಪಾದನೆ ಮಾಡುತ್ತಿದ್ದಾರೆ. ಇದರ ಹಿಂದೆ ಬಿಜೆಪಿ-ಜೆಡಿಎಸ್‌ ನಾಯಕರ ಷಡ್ಯಂತ್ರ ಇದೆ ಎಂದು ಡಿಕೆಶಿ ಆರೋಪಿಸಿದ್ದಾರೆ. ನಾನೀಗ ಬೆಂಗಳೂರಿನಿಂದ ಹೊರಗೆ ಇದ್ದು, ಬಂದ ಅನಂತರ ಈ ಬಗ್ಗೆ ಮಾತಾಡುತ್ತೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular