Monday, April 21, 2025
Google search engine

Homeಸ್ಥಳೀಯಜನರ ಆಶೀರ್ವಾದದೊಂದಿಗೆ 7 ಬಾರಿ ನಂದಿಧ್ವಜಕ್ಕೆ ಪೂಜೆ ನೆರವೇರಸಿದ್ದೇನೆ : ಸಿಎಂ ಸಿದ್ದರಾಮಯ್ಯ

ಜನರ ಆಶೀರ್ವಾದದೊಂದಿಗೆ 7 ಬಾರಿ ನಂದಿಧ್ವಜಕ್ಕೆ ಪೂಜೆ ನೆರವೇರಸಿದ್ದೇನೆ : ಸಿಎಂ ಸಿದ್ದರಾಮಯ್ಯ

ಮೈಸೂರು : ನಾಡಿನ ಜನತೆಗೆ ನಾಡಹಬ್ಬ ಮೈಸೂರು ದಸರಾದ ಶುಭಾಶಯಗಳು. ಈ ಹಬ್ಬ ದುಷ್ಟ ಶಕ್ತಿಗಳ ಸಂಹಾರ ಮಾಡಿ ಶಿಷ್ಟರನ್ನು ರಕ್ಷಿಸುವ ಹಬ್ಬವಾಗಿದೆ. ಜನರ ಆಶೀರ್ವಾದ ಸಿಕ್ಕಿದೆ ಅದಕ್ಕೆ ೭ ಬಾರಿ ನಂದಿ ಧ್ವಜಕ್ಕೆ ಪೂಜೆ ನೆರವೇರಿಸಿದ್ದೇನೆ ಎಂದು ನಂದಿದ್ವಜಕ್ಕೆ ಪೂಜೆ ನೆರವೇರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.

ಇಂದು ಮೈಸೂರು ಅರಮನೆ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ, ಸಚಿವ ಮಂಕಾಳು ವೈದ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಹಲವು ಸಚಿವರು ಇಂದು ನಂದಿ ದ್ವಜ ಪೂಜೆಯಲ್ಲಿ ಭಾಗವಹಿಸಿದ್ದರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ನಂದಿ ಧ್ವಜಕ್ಕೆ ಪೂಜೆ ನೆರವೇರಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ವಿಜಯದಶಮಿಯು ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಜಂಬೂಸವಾರಿ, ಪಂಜಿನ ಮೆರವಣಿಗೆ ಸೇರಿದಂತೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ನಡೆಯಲಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ಹಾಗೂ ದೇಶದ ಜನರಿಗೆ ದಸರೆಯ ಶುಭಾಶಯಗಳು ಎಂದು ಶುಭ ಕೋರಿದರು.

ಈ ಬಾರಿನಲ್ಲಿ ಉತ್ತಮ ಮಳೆ ಹಾಗೂ ಬೆಳೆಯಾಗಿದ್ದು, ರೈತರಲ್ಲಿ ನೆಮ್ಮದಿ ಮನೆಮಾಡಿದೆ. ರಾಜ್ಯದ ಎಲ್ಲಾ ಜಲಾಶಯಗಳು ತುಂಬಿರುವುದು ಸಂತಸದ ವಿಚಾರ. ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ. ರಾಜ್ಯದಲ್ಲಿ ಅಶಾಂತಿ ಮೂಡಿಸಿ, ಬದುಕುಗಳನ್ನು ಹಾಳುಮಾಡಲು ಸಂಚು ರೂಪಿಸುವವರಿಗೆ ದೇವರು ಸದ್ಭುದ್ಧಿ ನೀಡಲಿ ಎಂದು ಹಾರೈಸುತ್ತೇನೆ ಎಂದರು.

RELATED ARTICLES
- Advertisment -
Google search engine

Most Popular