ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಲ್ಪ ಟೆನ್ಶನ್ ಆಗಿದ್ದಾರೆ ಎಂದು ಹೇಳಲಾಗುತ್ತಿತ್ತು ಆದರೆ ಅವರಿಗೆ ಯಾವುದೇ ಭಯವಿಲ್ಲದೆ, ಮೈಸೂರು ಜಿಲ್ಲೆಯಲ್ಲಿ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಇದೀಗ ಜಾತಿ ಗಣತಿ ವರದಿಯ ಕುರಿತು ಮಾತನಾಡಿದ್ದು, ಜಾತಿಗಣತಿ ವರದಿ ನಮ್ಮ ಪಕ್ಷದ ಅಜೆಂಡವಾಗಿದ್ದು, ಅದನ್ನು ಮುಂದೆ ಜಾರಿ ಮಾಡೇ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.
ಮೈಸೂರಿನಲ್ಲಿಂದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಜಾತಿ ಗಣತಿ ವರದಿ ನನ್ನ ಕೈ ಸೇರಿದೆ. ನಾನು ಇನ್ನು ಸಂಪೂರ್ಣವಾಗಿ ನೋಡಿಲ್ಲ. ಮುಂದೆ ಜಾತಿಗಣತಿ ವರದಿ ಸಂಪುಟದ ಮುಂದೆ ಇಟ್ಟು ಜಾರಿಗೊಳಿಸುತ್ತೇನೆ ಜಾತಿಗಣತಿ ಜಾರಿ ನಮ್ಮ ಪಕ್ಷದ ಅಜೆಂಡವಾಗಿದೆ. ಹಾಗಾಗಿ ಅದನ್ನು ಜಾರಿಗೆ ಮಾಡೇ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.