Friday, April 11, 2025
Google search engine

Homeರಾಜಕೀಯಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಬಿಳಿಗೆರೆಯಲ್ಲಿ ಆಯೋಜಿಸಿದ್ದ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ಧರಾಮಯ್ಯ, ನಾವು ಹೇಳಿದಂತೆ 5 ಗ್ಯಾರಂಟಿ ಯೋಜನೆಗಳನ್ನ ಜಾರಿಮಾಡಿದ್ದೇವೆ. ಬಿಜೆಪಿಯವರಂತೆ  ನಾವು ವಚನ ಭ್ರಷ್ಟರಲ್ಲ. ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನರು ಬೇಸತ್ತಿದ್ದರು. ಜನರು ಹೊಸ ಬದಲಾವಣೆ ಬಯಸಿ ಕಾಂಗ್ರೆಸ್ ಗೆ ಮತ ನೀಡಿದ್ದಾರೆ. ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಈ ಹಿಂದೆ ವರುಣಾ ಕ್ಷೇತ್ರದಿಂದ ಗೆದ್ದು ಸಿಎಂ ಆಗಿದ್ದೆ. ಮತ್ತೊಮ್ಮೆ ವರುಣಾ ಕ್ಷೇತ್ರದಿಂದ ಗೆದ್ದು ಸಿಎಂ ಆಗಿದ್ದೇನೆ ಇದೆಲ್ಲಾ ವರುಣಾ ಕ್ಷೇತ್ರದ ಜನರು ಕೊಟ್ಟಿರುವ ಶಕ್ತಿ ಎಂದು ನುಡಿದರು.

ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ. ಆದರೆ ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುತ್ತೇನೆ. ನನ್ನ ಕೊನೆ ಉಸಿರು ಇರುವವರಗೂ ಜನರ ಸೇವೆ ಮಾಡುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು.

RELATED ARTICLES
- Advertisment -
Google search engine

Most Popular