Tuesday, February 17, 2026
Google search engine

Homeರಾಜ್ಯಸುದ್ದಿಜಾಲಹಾಸನದಲ್ಲಿ ಯಾರೇ ಅಭ್ಯರ್ಥಿಯಾದರೂ ನಾನು ಕೆಲಸ ಮಾಡ್ತೇನೆ: ಪ್ರಜ್ವಲ್ ರೇವಣ್ಣ

ಹಾಸನದಲ್ಲಿ ಯಾರೇ ಅಭ್ಯರ್ಥಿಯಾದರೂ ನಾನು ಕೆಲಸ ಮಾಡ್ತೇನೆ: ಪ್ರಜ್ವಲ್ ರೇವಣ್ಣ

ಬೆಂಗಳೂರು: ಹಾಸನದಲ್ಲಿ ಯಾರೇ ಅಭ್ಯರ್ಥಿಯಾದರೂ ನಾನು ಕೆಲಸ ಮಾಡುತ್ತೇನೆ. ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಜನರು ಅಸಮಾಧಾನಗೊಂಡಿದ್ದಾರೆ ಎಂದು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಬಗ್ಗೆ ಹೆಚ್ .ಡಿ ದೇವೆಗೌಡ ಅವರ ಜೊತೆ ಬಿವೈ ವಿಜಯೇಂದ್ರ ಅಣ್ಣ ಮುಕ್ತವಾಗಿ ಚರ್ಚೆ ಮಾಡಿದ್ದಾರೆ. ಸಣ್ಣಪುಟ್ಟ ಗೊಂದಲ ಇತ್ತು ಅದನ್ನು ಬಗೆಹರಿಸಿಕೊಂಡು ಹೋರಾಟ ಮಾಡುವ ಬಗ್ಗೆ ಚರ್ಚೆ ಮಾಡಿದ್ದೇವೆ.

ಕಳೆದ ಬಾರಿಗಿಂತ ಎರಡರಷ್ಟು ಒಡಾಟ ಮಾಡಿ ನಮ್ಮ ಅಭ್ಯರ್ಥಿ ಗೆಲ್ಲಿಸಿಕೊಂಡು ಬರುತ್ತೇವೆ. ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಜನ ಅಸಮಾಧಾನಗೊಂಡಿದ್ದಾರೆ. ಕಾಂಗ್ರೆಸ್ ಕರ್ನಾಟಕ ಮಾಡೆಲ್ ಲೋಕಸಭಾ ಚುನಾವಣೆ ಅಲ್ಲ ಯಾವ ಚುನಾವಣೆಯಲ್ಲಿ ವರ್ಕೌಟ್ ಆಗಲ್ಲ ಎಂದರು.

RELATED ARTICLES
- Advertisment -
Google search engine

Most Popular