Thursday, November 27, 2025
Google search engine

Homeರಾಜ್ಯಸುದ್ದಿಜಾಲಐಎಎಸ್​ ಅಧಿಕಾರಿ ಮಹಾಂತೇಶ ಬೀಳಗಿ ಪಂಚಭೂತಗಳಲ್ಲಿ ಲೀನ: ಏಕಕಾಲಕ್ಕೆ ನಾಲ್ವರ ಅಂತ್ಯಕ್ರಿಯೆ.

ಐಎಎಸ್​ ಅಧಿಕಾರಿ ಮಹಾಂತೇಶ ಬೀಳಗಿ ಪಂಚಭೂತಗಳಲ್ಲಿ ಲೀನ: ಏಕಕಾಲಕ್ಕೆ ನಾಲ್ವರ ಅಂತ್ಯಕ್ರಿಯೆ.

ವರದಿ :ಸ್ಟೀಫನ್ ಜೇಮ್ಸ್.

ಬುಧವಾರ ಸಂಜೆ ರಾಮದುರ್ಗ ಬಳಿ ಇರುವ ಅವರ ಜಮೀನಿನಲ್ಲಿ ಮಹಾಂತೇಶ್​​ ಬೀಳಗಿ ಸೇರಿ ಅಪಘಾತದಲ್ಲಿ ಮೃತಪಟ್ಟ ಒಟ್ಟು ನಾಲ್ವರ ಅಂತ್ಯಕ್ರಿಯೆಯನ್ನು ಏಕಕಾಲಕ್ಕೆ ನೆರವೇರಿಸಲಾಯಿತು.

ಬೆಳಗಾವಿ: ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್​ ಅಧಿಕಾರಿ ಮಹಾಂತೇಶ್​ ಬೀಳಗಿ ಅವರು ತಮ್ಮ ಹುಟ್ಟೂರು ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಪಂಚಭೂತಗಳಲ್ಲಿ ಲೀನವಾದರು.

ಇಂದು ಸಂಜೆ ರಾಮದುರ್ಗ ಬಳಿ ಇರುವ ಅವರ ಜಮೀನಿನಲ್ಲಿ ಮಹಾಂತೇಶ್​​ ಬೀಳಗಿ ಸೇರಿ ಅಪಘಾತದಲ್ಲಿ ಮೃತಪಟ್ಟ ಒಟ್ಟು ನಾಲ್ವರ ಅಂತ್ಯಕ್ರಿಯೆಯನ್ನು ಏಕಕಾಲಕ್ಕೆ ನೆರವೇರಿಸಲಾಯಿತು.

ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲಾಗಿದ್ದು, ಮಹಾಂತೇಶ್​​ ಬೀಳಗಿ ಅವರ ತಾಯಿ ಸಮಾಧಿ ಪಕ್ಕದಲ್ಲೇ ಅವರ ಅಂತಿಮ ಕಾರ್ಯ ನಡೆದಿದೆ.

ಇದಕ್ಕೂ ಮುನ್ನ ರಾಮದುರ್ಗ ಪಟ್ಟಣದ ಪಂಚಗಟ್ಟಿಮಠ ಶಾಲಾ ಮೈದಾನದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಾವಿರಾರು ಜನ ಆಗಮಿಸಿ ಅಂತಿಮ ದರ್ಶನ ಪಡೆದರು.

ಪ್ರಾದೇಶಿಕ ಆಯುಕ್ತೆ ಜಾನಕಿ, ಜಿ.ಪಂ.ಸಿಇಒ ರಾಹುಲ್ ಶಿಂಧೆ, ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ ಸೇರಿದಂತೆ ಹಲವು ಗಣ್ಯರು ಬೀಳಗಿ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಬಳಿಕ ಮಹಾಂತೇಶ ಅವರ ಪತ್ನಿ ರೇಖಾ ಮತ್ತು ಪುತ್ರಿ ಚೈತನ್ಯಾ ಅವರಿಗೆ ಧೈರ್ಯ ತುಂಬಿದರು.

ಈ ವೇಳೆ ಪೊಲೀಸ್ ಸಿಬ್ಬಂದಿ ಗಾಳಿಯಲ್ಲಿ ‌ಮೂರು ಸುತ್ತು ಗುಂಡು ಹಾರಿಸಿ ಸರ್ಕಾರಿ ಗೌರವ ಸಲ್ಲಿಸಿದರು.

ಈ ಅಪಘಾತದಲ್ಲಿ ಮೃಪಟ್ಟವರ ಸಂಖ್ಯೆ ಇದೀಗ ನಾಲ್ಕಕ್ಕೆ ಏರಿಕೆಯಾಗಿದೆ. ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈರಣ್ಣ ಸಿರಸಂಗಿ ಅವರು ಇಂದು ನಸುಕಿನಲ್ಲಿ ಮೃತಪಟ್ಟಿದ್ದಾರೆ. ಅವಘಡದಲ್ಲಿ ಈರಣ್ಣ ಬೀಳಗಿ, ಶಂಕರ್ ಬೀಳಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಲಬುರಗಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಕಾರು ಚಾಲಕ ರಾಜು ಅವರು ಗಂಭೀರ ಸ್ಥಿತಿಯಲ್ಲಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

RELATED ARTICLES
- Advertisment -
Google search engine

Most Popular