Friday, April 11, 2025
Google search engine

Homeರಾಜ್ಯಸುದ್ದಿಜಾಲಬಾಲಕಾರ್ಮಿಕರ ಗುರುತಿಸಿ ಪುನರ್ವಸತಿ ಕಲ್ಪಿಸಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಬಾಲಕಾರ್ಮಿಕರ ಗುರುತಿಸಿ ಪುನರ್ವಸತಿ ಕಲ್ಪಿಸಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಚಾಮರಾಜನಗರ: ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗೆ ಜಾಗೃತಿ ಕಾರ್ಯಕ್ರಮಗಳ ಮೂಲಕ ಬಾಲಕಾರ್ಮಿಕರನ್ನು ಗುರುತಿಸಿ ಪುನರ್ವಸತಿ ಕಲ್ಪಿಸಲು ಮುಂದಾಗುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಬಾಲಕಾರ್ಮಿಕರ ನಿರ್ಮೂಲನೆ ಕುರಿತ ಜಿಲ್ಲಾಮಟ್ಟದ ಟಾಸ್ಕ್‌ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ದತಿ ಹಾಗೂ ಬಾಲ್ಯವಿವಾಹಗಳು ಹೆಚ್ಚಿನ ಸಂಖ್ಯೆಯಲ್ಲಿ ಜೀವಂತವಾಗಿವೆ. ಬಡತನ ಹಾಗೂ ಇತರೆ ಕಾರಣಗಳಿಂದ ಮಕ್ಕಳ ಬಾಲ್ಯವನ್ನು ಕಸಿಯುತ್ತಿರುವುದು ದೊಡ್ಡ ದುರಂತವಾಗಿದೆ. ಈ ಸಾಮಾಜಿಕ ಅನಿಷ್ಠ ಪದ್ದತಿಗಳ ನಿರ್ಮೂಲನೆಗೆ ಸಾಕಷ್ಟು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಜೊತೆಗೆ ಬಾಲಕಾರ್ಮಿಕರನ್ನು ಗುರುತಿಸುವಿಕೆಗೆ ಜಿಲ್ಲಾಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳು ವೈಯಕ್ತಿಕ ಗಮನಹರಿಸಲು ಮುಂದಾಗುವಂತೆ ಸೂಚಿಸಿದರು.

ಜಿಲ್ಲಾಮಟ್ಟದ ಟಾಸ್ಕ್‌ಪೋರ್ಸ್ ಸಮಿತಿಯು ೨೦೨೩ರ ಏಪ್ರಿಲ್‌ನಿಂದ ಅಕ್ಟೋಬರ್ ಅಂತ್ಯದವರೆಗೆ ಬಾಲ್ಯಾವಸ್ಥೆಯ ೩ ಮಕ್ಕಳು ಹಾಗೂ ಕಿಶೋರಾವಸ್ಥೆಯ ೧೮ ಬಾಲಕಾರ್ಮಿಕ ಮಕ್ಕಳನ್ನು ಗುರುತಿಸಲಾಗಿದೆ. ಈ ಪೈಕಿ ನೇರವಾಗಿ ಮಕ್ಕಳನ್ನು ಶಾಲೆಗೆ ದಾಖಲಿಸಲಾಗಿರುವ ೬ ಮಕ್ಕಳು ಹಾಗೂ ಅವರ ಕಲಿಕಾ ಪ್ರಕ್ರಿಯೆ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ವರದಿ ಸಲ್ಲಿಸಬೇಕು. ಶಾಲೆಯಿಂದ ಹೊರಗುಳಿದ ಯಾವುದೇ ಮಕ್ಕಳ ಬಗ್ಗೆ ಮಾಹಿತಿ ಸಂಗ್ರಹಿಸಿ ಅವರನ್ನು ಮರಳಿ ಶಾಲೆಗೆ ಕರೆತರುವಲ್ಲಿ ತಾಲೂಕು, ಜಿಲ್ಲಾಮಟ್ಟದ ಟಾಸ್ಕ್‌ಪೋರ್ಸ್ ಸಮಿತಿಗಳು ಸಕ್ರಿಯರಾಗಬೇಕು ಎಂದು ತಿಳಿಸಿದರು.

ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ನಡೆಯುವ ಮಕ್ಕಳ ಗ್ರಾಮಸಭೆಗಳನ್ನು ಪರಿಣಾಮಕಾರಿಯಾಗಿ ನಡೆಸಬೇಕು. ಗ್ರಾಮಸಭೆಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಜಾಗೃತಿ ಜೊತೆಗೆ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಮಕ್ಕಳು ಶಾಲೆಗಳ ಹಾಜರಾಗದಿದ್ದರೆ ಅದಕ್ಕೆ ಕಾರಣಗಳನ್ನು ಅರಿಯಲು ವಾರಕ್ಕೊಂದು ಬಾರಿ ಶಾಲೆಗೆ ಭೇಟಿ ನೀಡಿ ತಪಾಸಣೆ ನಡೆಸಿ ತಾಲೂಕುವಾರು ವರದಿ ನೀಡಬೇಕು. ಈ ಬಗ್ಗೆ ಕಾಡಂಚಿನ ಗ್ರಾಮಗಳ ಗಿರಿಜನ ಶಾಲೆಗಳಲ್ಲಿಯೂ ತಪಾಸಣೆ ಕೈಗೊಳ್ಳುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಈಗಾಗಲೇ ತಿಳಿಸಲಾಗಿದೆ ಎಂದರು.

ನಗರಸಭೆ ಪೌರಾಯುಕ್ತರಾದ ರಾಮದಾಸ್, ಜಿಲ್ಲಾ ಕಾರ್ಮಿಕ ಅಧಿಕಾರಿ ಸವಿತ, ಹಿರಿಯ ಕಾರ್ಮಿಕ ನಿರೀಕ್ಷಕರಾದ ವೀಣಾ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಮಹೇಶ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಜಿಲ್ಲಾಮಟ್ಟದ ಅಧಿಕಾರಿಗಳು, ಇತರರು ಸಭೆಯಲ್ಲಿ ಇದ್ದರು.

RELATED ARTICLES
- Advertisment -
Google search engine

Most Popular