ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತಗಳು ಕಡಿಮೆಯಾಗುತ್ತಿದ್ದರೂ ಈ ವ್ಯಾಪ್ತಿಯಲ್ಲಿ ಬಿಡದಿಯ ಶೇಷಗಿರಿಹಳ್ಳಿ, ಹೆಜ್ಜಾಲ ಗೇಟ್, ಕಲ್ಗೋಪ ಹಾಗೂ ಹನುಮಂತನಗರದಲ್ಲಿ ಅಪಘಾತಗಳಾಗುತ್ತಿವೆ. ಅದನ್ನು ತಡೆಗಟ್ಟುವ ಉದ್ದೇಶದಿಂದ ಅಪಘಾತ ವಲಯದ ಬ್ಲಾಕ್ ಸ್ಪಾಟ್ ಎಂದು ಗುರುತಿಸಿ ಅಪಘಾತಗಳನ್ನು ತಡೆಗಟ್ಟಲು ಕೈಗೊಳ್ಳಬೇಕಾಗದ ಕ್ರಮಗಳನ್ನು ಕೂಡಲೇ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅವರು ಸೆ. 10 ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸ್ಥಳಗಳಲ್ಲಿ ವಾಹನ ಸವಾರರು ರಾಂಗ್ ರೂಟಲ್ಲಿ ಸಂಚರಿಸುವ ಕಾರಣ ಅಪಘಾತಗಳು ಸಂಭವಿಸುತ್ತವೆ ಹಾಗಾಗಿ ಈ ರೀತಿ ತಪ್ಪು ಮಾರ್ಗದಲ್ಲಿ ಸಂಚರಿಸುವವರಿಗೆ ಮೊದಲ ಹಂತದಲ್ಲಿ ದಂಡ ವಿಧಿಸಬೇಕು ನಂತರ ಕಾನೂನು ಪ್ರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಈ ಜಾಗಗಳಲ್ಲಿ ಹಂಪ್ಸ್ ಹಾಕಿಸಿ ಅದಕ್ಕೆ ಬಣ್ಣ ಬಳಿಯಬೇಕು ಹಾಗೂ ಈ ಬಗ್ಗೆ ಮಾಹಿತಿ ನೀಡುವ ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದು ಪೊಲೀಸ್, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ರಸ್ತೆಯಲ್ಲಿನ ಗುಂಡಿಗಳಿದ ಅಪಘಾತಗಳಾಗುವುದು ಅಥವಾ ಸಾವು ನೋವು ಸಂಭವಿಸದAತೆ ಎಚ್ಚರಿಕೆ ವಹಿಸಬೇಕು. ಪ್ರಮುಖವಾಗಿ ಬಸ್‌ಗಳು ಸಂಚರಿಸುವ ರಸ್ತೆಯಲ್ಲಿ ಗುಂಡಿಗಳಿದ್ದರೆ ಮೊದಲು ಮುಚ್ಚಬೇಕು ಯಾವುದೇ ಕಾರಣಕ್ಕೂ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಮೈಸೂರು ಬೆಂಗಳೂರು ಹೆದ್ದಾರಿ ಮಾರ್ಗದಲ್ಲಿ ಹಾಕಲಾಗಿರುವ ರಸ್ತೆ ಸುರಕ್ಷತೆಯ ಮೆಸ್ ಗಳನ್ನು ಕೆಲವೆಡೆ ಕತ್ತರಿಸಲಾಗಿದ್ದು ಅದನ್ನು ಪುನಃ ಸುಸ್ಥಿತಿಗೆ ತರಬೇಕು ಹಾಗೂ ಈ ಹೆದ್ದಾರಿಯಲ್ಲಿ ಅಪಘಾತಗಳು ಹಾಗೂ ಸಾವು ನೋವುಗಳು ಆಗದಂತೆ ಎಚ್ಚರಿಕೆಯ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿಯವರು ಸಂಬAಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಲೋಕೋಪಯೋಗಿ ವಿಭಾಗದ ಕಾರ್ಯಪಾಲಕ ಅಭಿಯಂತರ ಎಚ್. ಎಂ. ಮಹಾದೇವಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿತೇಂದ್ರ, ಪೊಲೀಸ್ ಅಧಿಕಾರಿಗಳು, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಿರಂಜನ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಅಭಿಯಂತರ ನಿಶ್ಚಿತ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್ ಸೇರಿದಂತೆ ಸಂಬಧಿಸಿದ ಅಧಿಕಾರಿಗಳು ಸಭೆಯಲ್ಲಿದ್ದರು.