Wednesday, April 16, 2025
Google search engine

HomeUncategorizedರಾಷ್ಟ್ರೀಯಛತ್ತೀಸ್​ ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಇಬ್ಬರು ಯೋಧರು ಹುತಾತ್ಮ, ನಾಲ್ವರಿಗೆ ಗಾಯ

ಛತ್ತೀಸ್​ ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಇಬ್ಬರು ಯೋಧರು ಹುತಾತ್ಮ, ನಾಲ್ವರಿಗೆ ಗಾಯ

ಛತ್ತೀಸ್​ಗಢದ ಬಿಜಾಪುರದಲ್ಲಿ ನಡೆಸಿದ ಐಇಡಿ(ಸುಧಾರಿತ ಸ್ಫೋಟಕ) ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ.

 ರಾಜ್ಯ ಕಾರ್ಯಪಡೆಯ ಮುಖ್ಯ ಕಾನ್‌ ಸ್ಟೆಬಲ್ ಭರತ್ ಲಾಲ್ ಸಾಹು ಮತ್ತು ಕಾನ್‌ಸ್ಟೆಬಲ್ ಸತೇರ್ ಸಿಂಗ್ ಅವರು ದೇಶಕ್ಕೆ ಪ್ರಾಣ ಅರ್ಪಿಸಿದ್ದಾರೆ.

ತಾರೆಮ್ ಪೊಲೀಸ್ ಠಾಣೆ ವ್ಯಾಪ್ತಿಯ ಮಂಡಿಮಾರ್ಕಾ ಅರಣ್ಯದಲ್ಲಿ ಕಳೆದ ರಾತ್ರಿ ಐಇಡಿ ಸ್ಫೋಟ ಸಂಭವಿಸಿದೆ. ಭದ್ರತಾ ಪಡೆ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಪೈಪ್ ಬಾಂಬ್ ಸ್ಫೋಟಗೊಂಡಿದೆ.

ಪುರುಷೋತ್ತಮ್ ನಾಗ್, ಕೋಮಲ್ ಯಾದವ್, ಸಿಯಾರಾಮ್ ಸೋರಿ ಮತ್ತು ಸಂಜಯ್ ಕುಮಾರ್ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಭದ್ರತಾ ಪಡೆಗಳನ್ನು ರವಾನಿಸಲಾಗಿದ್ದು, ಗಾಯಗೊಂಡ ಎಸ್‌ಟಿಎಫ್ ಯೋಧರಿಗೆ ಸೂಕ್ತ ಚಿಕಿತ್ಸೆ ನೀಡಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular