Thursday, December 18, 2025
Google search engine

Homeರಾಜಕೀಯಕಾಂಗ್ರೆಸ್‌ ಅಧಿಕಾರದಲ್ಲಿದ್ದರೆ ಹೈಕಮಾಂಡ್‌ಗೆ ಕರ್ನಾಟಕವೇ ಎಟಿಎಂ : ಬಿ.ವೈ ವಿಜಯೇಂದ್ರ

ಕಾಂಗ್ರೆಸ್‌ ಅಧಿಕಾರದಲ್ಲಿದ್ದರೆ ಹೈಕಮಾಂಡ್‌ಗೆ ಕರ್ನಾಟಕವೇ ಎಟಿಎಂ : ಬಿ.ವೈ ವಿಜಯೇಂದ್ರ

ಬೆಳಗಾವಿ: ರಾಜ್ಯ ಕಾಂಗ್ರೆಸ್‌ ಸರ್ಕಾರವು ರಾಜ್ಯದ ಖಜಾನೆಯನ್ನ ಲೂಟಿ ಮಾಡಿ ಕಾಂಗ್ರೆಸ್‌ ತನ್ನ ಹೈಕಮಾಂಡ್‌ ಪಕ್ಷವನ್ನ ತೃಪ್ತಿಪಡಿಸುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗದಗದಲ್ಲಿ ಆಯುಷ್ ಇಲಾಖೆಯ ಔಷಧಿ ಖರೀದಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ವಿಚಾರಕ್ಕೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿಂದ ಭ್ರಷ್ಟಾಚಾರದ ಮೂಲಕ ಕಾಂಗ್ರೆಸ್ ಹೈಕಮಾಂಡ್‌ಗೆ ಹಣ ಸಂದಾಯ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಅವರ ಹೈಕಮಾಂಡ್ ಎಟಿಎಂ ಆಗಿ ಪರಿವರ್ತನೆ ಆಗುತ್ತೆ ಅಂತಾ ಹಿಂದೆನೇ ಹೇಳಿದ್ದೆ. ಅದೇ ರೀತಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ಹಣ ಪೋಲಾಯ್ತು. ಇದೀಗ ಹೈಕಮಾಂಡ್ ತೃಪ್ತಿ ಪಡಿಸಲು ಗುತ್ತಿಗೆದಾರರ ಬಳಿ ಕಮಿಷನ್ ಪಡೆಯುವಂತಾಗಿದ್ದು, ಗುತ್ತಿಗೆದಾರರ ಸಂಘದವರು ಸಹ ಪತ್ರ ಬರೆದಿದ್ದಾರೆ.

ಭ್ರಷ್ಟಾಚಾರ ಬಿಟ್ಟರೆ ರಾಜ್ಯದಲ್ಲಿ ಏನೂ ಅಭಿವೃದ್ಧಿ ಆಗ್ತಿಲ್ಲ ಎಂದು ಕಿಡಿಕಾರಿದ್ದಾರೆ. ಇನ್ನೂ ದುಡ್ಡು ಹೊಡೆಯೋರಿಗೆ ಬಡವರಾದರೇನೂ ಶ್ರೀಮಂತರಾದರೇನು? ರಾಜ್ಯದ ಖಜಾನೆ ಖಾಲಿ ಮಾಡಿ ಹೈಕಮಾಂಡ್ ತೃಪ್ತಿ ಪಡಿಸುವ ಕೆಲಸ ನಡೀತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

RELATED ARTICLES
- Advertisment -
Google search engine

Most Popular