Saturday, April 19, 2025
Google search engine

Homeಸ್ಥಳೀಯಕುಮಾರಸ್ವಾಮಿ ಮಾಡಿರುವ ಆರೋಪ ಸಾಬೀತು ಪಡಿಸಿದರೆ ಸಿಎಂ ಸಿದ್ದರಾಮಯ್ಯ ರಾಜಿನಾಮೆ: ಲಕ್ಷ್ಮಣ್

ಕುಮಾರಸ್ವಾಮಿ ಮಾಡಿರುವ ಆರೋಪ ಸಾಬೀತು ಪಡಿಸಿದರೆ ಸಿಎಂ ಸಿದ್ದರಾಮಯ್ಯ ರಾಜಿನಾಮೆ: ಲಕ್ಷ್ಮಣ್

ಮೈಸೂರು: ಅಂಗವಿಕಲ ದಲಿತರಿಗೆ ವಿಜಯನಗರದಲ್ಲಿ ಮುಡಾದಿಂದ ಮಂಜೂರಾಗಿದ್ದ ಜಾಗದಲ್ಲಿ ಸಿದ್ದರಾಮಯ್ಯ ಅವರು ಡಿಸಿಎಂ ಆಗಿದ್ದ ಅವಧಿಯಲ್ಲಿ ಮನೆ ನಿರ್ಮಿಸಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಧಾರ ರಹಿತ ಆರೋಪ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಹಿಟ್ ಅಂಡ್ ರನ್ ಹೇಳಿಕೆಗಳನ್ನು ನೀಡುವ ಮೂಲಕ ಜನಪ್ರಿಯರಾಗಿದ್ದಾರೆ. ಸಿದ್ದರಾಮಯ್ಯ ದಲಿತರ ಜಮೀನು ಕಿತ್ತುಕೊಂಡಿರುವುದನ್ನು ಸಾಬೀತುಪಡಿಸಿದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ, ಆದರೆ ಅದನ್ನು ಸಾಬೀತುಪಡಿಸಲು ಕುಮಾರಸ್ವಾಮಿ ವಿಫಲವಾದರೆ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.

ಸಿದ್ದರಾಮಯ್ಯ ವಿರುದ್ಧ ಆಧಾರ ರಹಿತ ಆರೋಪ ಮಾಡುವುದನ್ನು ಕುಮಾರಸ್ವಾಮಿ ನಿಲ್ಲಿಸಬೇಕು. ನಕಲಿ ದಾಖಲೆಗಳನ್ನು ನೀಡಿ ಸುಳ್ಳು ಮಾಹಿತಿ ನೀಡಿದರೆ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular